ಹಿಮ್ಸ್ ಆಸ್ಪತ್ರೆ ಅಭಿವೃದ್ಧಿಗೆ 171 ಕೋಟಿ ರೂ.ಗಳ ಹೊಸ ಯೋಜನೆ

ಈ ಸುದ್ದಿಯನ್ನು ಶೇರ್ ಮಾಡಿ

Revanna--021
ಹಾಸನ ಜೂ.26- ಹಾಸನಾಂಬ ವೈದ್ಯಕೀಯ ಕಾಲೇಜು ಮತ್ತು ಜಿಲ್ಲಾಸ್ಪತ್ರೆ ಸಾಮಥ್ರ್ಯ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ದಿಗೆ 171 ಕೋಟಿ ರೂ.ಗಳ ಹೊಸ ಯೋಜನೆ ರೂಪಿಸಿದ್ದು ಶೀಘ್ರವೇ ಅನುಮೋದನೆ ಪಡೆದು ಅನುದಾನ ಒದಗಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದ್ದಾರೆ.

ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಸ್ಥಳ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಹಿಮ್ಸ್ ನಿರ್ದೇಶಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹಾಲಿ ಇರುವ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು 7 ಅಂತಸ್ತಿಗೆ ಏರಿಸುವ ಯೋಜನೆಗೆ 135 ಕೋಟಿ, ವೈದ್ಯಕೀಯ ಹಾಗೂ ಸ್ನಾತ್ತಕೋತ್ತರ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡಗಳಿಗೆ 24 ಕೋಟಿ ಮತ್ತು ನರ್ಸ್‍ಗಳ ವಸತಿ ನಿಲಯಕ್ಕೆ 12 ಕೋಟಿ ರೂ. ಅಂದಾಜಿಸಲಾಗಿದೆ ವಿವರವಾದ ಕ್ರಿಯಾ ಯೋಜನೆ ಸಿದ್ದಪಡಿಸಿ ಅನುಸ್ಠಾನಗೊಳಿಸಲಾಗುವುದು ಎಂದು ಸಚಿವರು ಹೇಳಿದರು.

ಎಲ್ಲಾ ತಾಲ್ಲೂಕು ಕೇಂದ್ರಗಳಿಂದ ಶಾಲಾ-ಕಾಲೇಜು ಅವಧಿಯಲ್ಲಿ ಹೆಣ್ಣ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಾಗುವುದು. ಹಳ್ಳಿಗಾಡಿನ ಮಕ್ಕಳಿಗೆ ಒಳ್ಳೆಯ ಶೈಕ್ಷಣಿಕ ವಾತಾವರಣ ರೂಪಿಸಬೇಕೆಂಬುದು ತಮ್ಮ ಆಶಯ ರಾಜ್ಯದ ಎಲ್ಲಾ ವರ್ಗದ ಮಕ್ಕಳಿಗೂ ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಮುಂಬರುವ ಬಜೆಟ್‍ನಲ್ಲಿ ಅನುಧಾನ ಕಾಯ್ದಿರಿಸಲಾಗುವುದು ಎಂದು ತಿಳಿಸಿದರು.ನಗರದ ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ ಲ್ಯಾಬ್ ವ್ಯವಸ್ಥೆಗೆ ಅಗತ್ಯ ಅನುದಾನ ಹಾಗೂ ಮಂಜೂರಾತಿ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.

ಏರ್ ಪೋರ್ಟ್‍ಗೆ ಅಗತ್ಯವಿರುವ ಭೂಮಿ ಒದಗಿಸುವ ಸಂಬಂದ ಕಾರ್ಯಗಳನ್ನು ಚುರುಕುಗೊಳಿಸುವುದು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭದ ಬಗ್ಗೆಯೂ ಪ್ರಯತ್ನ ಮುಂದುವರೆಸಲಾಗುವುದು ಒಟ್ಟಾರೆ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಶಕ್ತಿಮೀರಿ ಶ್ರಮಿಸುವುದಾಗಿ ತಿಳಿಸಿದರು.ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕವಾದ ಸುಸಜ್ಜಿತ ಹೆರಿಗೆ ಹಾಗೂ ನವಜಾತ ಶಿಶುಗಳ ವಾರ್ಡ್ ಘಟಕ ಸ್ಥಾಪಿಸುವ ಚಿಂತನೆ ಕೂಡ ಇದೆ ಎಂದು ಸಚಿವರು ಹೇಳಿದರು. ಹಿಮ್ಸ್ ನಿರ್ದೇಶಕ ಡಾ.ರವಿಕುಮಾರ್, ಆಡಳಿತಾಧಿಕಾರಿ ಚಿದಾನಂದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಂಕರ್ ಮತ್ತಿತರರು ಹಾಜರಿದ್ದರು.

Facebook Comments

Sri Raghav

Admin