ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿಗೆ ಅದ್ದೂರಿ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

Venkaiah--001

ಬೆಂಗಳೂರು, ಜೂ.27-ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ರಾಜ್ಯ ಕ್ಯಾನ್ಸರ್ ಸಂಸ್ಥೆ ಸಂಕೀರ್ಣವನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ನಾಳೆ (ಜೂ.28)  ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿಯವರನ್ನು ರಾಜ್ಯಪಾಲ ವಜುಭಾಯಿ ವಾಲಾ , ಮೇಯರ್ ಸಂಪತ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಸೇರಿದಂತೆ ಹಲವರು ಉಪರಾಷ್ಟ್ರಪತಿಗಳಿಗೆ ಮೈಸೂರು ಪೇಟ ತೊಡಿಸಿ ಹೂಗುಚ್ಛ ನೀಡಿ ಸ್ವಾಗತಿಸಿದರು.

ನಾಳೆ ಕ್ಯಾನ್ಸರ್ ಸಂಸ್ಥೆ ಸಂಕೀರ್ಣ ಉದ್ಘಾಟನಾ ಸಮಾರಂಭಕ್ಕೆ ರಾಜ್ಯಪಾಲ ವಿ.ಆರ್.ವಾಲಾ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೇಂದ್ರ ಸಚಿವರಾದ ಅನಂತ್‍ಕುಮಾರ್, ಜೆ.ಪಿ.ನಡ್ಡಾ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ.

Facebook Comments

Sri Raghav

Admin