ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ : ದೇವೇಗೌಡರು

ಈ ಸುದ್ದಿಯನ್ನು ಶೇರ್ ಮಾಡಿ

Devegowda--01

ನವದೆಹಲಿ, ಜೂ.27-ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಲಿದ್ದಾರೆ. ಯಾರೂ ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಬಂದಿಲ್ಲ. ನಾಳೆ ನಡೆಯಲಿರುವ ರಕ್ಷಣಾ ಇಲಾಖೆಯ ಸ್ಥಾಯಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆ. ನಾನು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತೇನೆ ಎಂಬುದು ಕೇವಲ ಊಹಾಪೋಹ ಎಂದು ಪ್ರತಿಕ್ರಿಯಿಸಿದರು. ಸಮ್ಮಿಶ್ರ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಬಜೆಟ್ ಮಂಡನೆಯೂ ಖಚಿತ ಎಂದು ಸ್ಪಷ್ಟಪಡಿಸಿದರು.

Facebook Comments

Sri Raghav

Admin