ಬೆಂಗಳೂರಲ್ಲಿ ಮತ್ತೆ ಘರ್ಜಿಸಿದ ಪೊಲೀಸರ ಪಿಸ್ತೂಲು, ರೌಡಿಶೀಟರ್ ಸೈಕಲ್ ರವಿಗೆ ಗುಂಡೇಟು

ಈ ಸುದ್ದಿಯನ್ನು ಶೇರ್ ಮಾಡಿ

Cycle-Ravi
ಬೆಂಗಳೂರು, ಜೂ.27- ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪೊಲೀಸರ ಗುಂಡಿನ ಸದ್ದು ಮರುಕಳಿಸಿದ್ದು ರೌಡಿಶೀಟರ್ ರವಿ ಮೇಲೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ರೌಡಿಶೀಟರ್ ಸೈಕಲ್ ರವಿ ಕಾಲಿಗೆ ಗುಂಡೇಟು ತಗುಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಮಧ್ಯಾಹ್ನ ರೌಡಿ ಶೀಟರ್ ಸೈಕಲ್ ರವಿಯನ್ನು ಬಂಧಿಸಲು ಸಿಸಿಬಿ ಪೊಲೀಸರು ತೆರಳಿದ್ದಾಗ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ.

ಈ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಸಿದರೂ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸೈಕಲ್ ರವಿಯನ್ನು ಬಂಧಿಸಲು ಆತನ ಕಾಲಿಗೆ ಗುಂಡು ಹೊಡೆದು ವಶಕ್ಕೆ ತೆಗೆದುಕೊಂಡಿದ್ದಾರೆ.

Facebook Comments

Sri Raghav

Admin