ದೇವಾಲಯದ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Dead-Body-Women

ಉಡುಪಿ,ಜೂ.29-ದೇಗುಲದ ಕಾಂಪೌಂಡ್ ಕುಸಿದು ಎಂ.ಕಾಂ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಧನ್ಯಾ(22) ಮೃತಪಟ್ಟ ವಿದ್ಯಾರ್ಥಿನಿ.  ಈಕೆ ಎಂ.ಕಾಂ ವ್ಯಾಸಂಗ ಮಾಡುತ್ತಿದ್ದು ಇಂದು ಬೆಳಗ್ಗೆ ಎಂದಿನಂತೆ ಕಾಲೇಜಿಗೆ ತೆರಳಿದ್ದು, ಬೈಂದೂರಿನ ತಾಲ್ಲೂಕಿನ ಉಳ್ಳೂರಿನ ನಂದೀಶ್ವರ ದೇವಸ್ಥಾನದ ಬಳಿ ಬರುತ್ತಿದ್ದಾಗ ದೇಗುಲದ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಧನ್ಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಕಳೆದೆರಡು ದಿನಗಳಿಂದ ಸುರಿದ ಮಳೆಯಿಂದಾಗಿ ದೇವಸ್ಥಾನದ ಗೋಡೆ ಶಿಥಿಲಗೊಂಡು ಕುಸಿದು ಬಿದ್ದಿರುವುದರಿಂದ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗೋಡೆಯನ್ನು ತೆರವುಗೊಳಿಸಿ ಶವವನ್ನು ಹೊರತೆಗೆದಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin