ಕುರುಬ ಸಮುದಾಯದ ಶ್ರೀಗಳ ಆರೋಪಕ್ಕೆ ಡಿಕೆಶಿ ತಿರುಗೇಟು

ಈ ಸುದ್ದಿಯನ್ನು ಶೇರ್ ಮಾಡಿ

DK-Shivakumar--01
ಬೆಂಗಳೂರು, ಜೂ.29- ಕುರುಬ ಸಮುದಾಯದ ಶ್ರೀಗಳ ಆರೋಪಕ್ಕೆ ತಿರುಗೇಟು ನೀಡಿರುವ ಸಚಿವ ಡಿ.ಕೆ.ಶಿವಕುಮಾರ್ ವರ್ಗಾವಣೆ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಎಲ್ಲರನ್ನು ಸಮಾನವಾಗಿಯೇ ಸರ್ಕಾರ ನಡೆಸಿಕೊಳ್ಳಲಿದೆ. ಹಾಗೆಲ್ಲ ವರ್ಗಾವಣೆ ವಿಚಾರದಲ್ಲಿ ತಾರತಮ್ಯ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇಂದು ನಡೆಯುವ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ಸಭೆಯಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ಸಭೆಯ ಮುಂದಿಡುತ್ತೇವೆ. ಅಲ್ಲಿಯೇ ಎಲ್ಲ ಚರ್ಚೆಯಾಗಲಿದೆ ಎಂದು ತಿಳಿಸಿದರು.

Facebook Comments