ಎಣ್ಣೆ ಹೊಡೆದು ಟೈಟ್ ಆಗಿ ಮೊಬೈಲ್ ಟವರ್ ಏರಿ ಕುಳಿತ ಉಪನ್ಯಾಸಕ

ಈ ಸುದ್ದಿಯನ್ನು ಶೇರ್ ಮಾಡಿ

Mobile-Tower--01
ಮೈಸೂರು, ಜೂ.29-ಕುಡಿತದ ಅಮಲಿನಲ್ಲಿ ಉಪನ್ಯಾಸಕರೊಬ್ಬರು ಮೊಬೈಲ್ ಟವರ್ ಏರಿ ಕುಳಿತಿದ್ದ ಪ್ರಸಂಗ ನಡೆದಿದೆ. ಹಿನಕಲ್ ನಿವಾಸಿ ರಮೇಶ್‍ಕುಮಾರ್ (40) ಎಂಬುವರು ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದಿದ್ದ ಇವರು, ಕುಡಿದು ಹಿನಕಲ್ ಬಳಿ ಇರುವ ಮೊಬೈಲ್ ಟವರ್ ಏರಿ ಕುಳಿತಿದ್ದರು. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಆತನನ್ನು ಕೆಳಗೆ ಇಳಿಸಲು ಹರಸಾಹಸಪಟ್ಟು, ಅವರಿಗೆ ಬುದ್ಧಿಮಾತು ಹೇಳಿ ಕಳುಹಿಸಿದ್ದಾರೆ. ಈ ಹಿಂದೆಯೂ ಇದೇ ರೀತಿ ಮೊಬೈಲ್ ಟವರ್ ಏರಿ ಕುಳಿತಿದ್ದರು ಎಂದು ತಿಳಿದುಬಂದಿದೆ.

Facebook Comments

Sri Raghav

Admin