ಶಾಂತಿವನದ ವಿಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ : ಸಿದ್ದು

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--CM-Mysuru-01

ಬೆಂಗಳೂರು, ಜೂ.29- ಇತ್ತೀಚೆಗೆ ಬಿಡುಗಡೆಯಾಗಿರುವ ವಿಡಿಯೋಗೂ ನನಗೂ ಸಂಬಂಧವಿಲ್ಲ. ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಗೊಂದಲಗಳಿಗೂ ತೆರೆ ಎಳೆದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಹಿರಿಯ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಯಾವುದೋ ಒಂದು ವಿಡಿಯೋ ಬಿಡುಗಡೆಯಾಗಿದೆ. ನಾನು ಏನು ಹೇಳಿದ್ದೇನೆ. ಯಾವ ಸಂದರ್ಭಕ್ಕನುಗುಣವಾಗಿ (ಕಾನ್‍ಟೆಸ್ಟ್)ಹೇಳಿದ್ದೇನೆ ಎಂಬುದು ಯಾರಿಗೂ ಗೊತ್ತಿಲ್ಲ. ನಾನು ಮಾತನಾಡಿದ ಪೈಕಿ ಆಯ್ದ ಭಾಗಗಳನ್ನಷ್ಟೇ ಬಿಡುಗಡೆ ಮಾಡಲಾಗಿದೆ. ಅದರ ಹಿಂದೆ-ಮುಂದೆ ಹೇಳಿರುವ ಮಾತುಗಳು ವಿಡಿಯೋದಲ್ಲಿ ಇಲ್ಲ. ಇಂತಹ ನಡವಳಿಕೆಗಳು ನೈತಿಕವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯಾರೋ ಮಾಡಿದ ವಿಡಿಯೋಗೂ ನನಗೂ ಸಂಬಂಧವಿಲ್ಲ. ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎಂಬ ಉದ್ದೇಶದಿಂದ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿರಲಿದೆ. ಯಾವುದೇ ಅನುಮಾನ ಬೇಡ. ಈ ಸರ್ಕಾರದ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ. ಅಸಮಾಧಾನ ಇದೆ ಎಂದು  ನಿಮಗೆ ಹೇಳಿದವರು ಯಾರು ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.

Facebook Comments

Sri Raghav

Admin