ವಿಧಾನಸಭೆ ಸದಸ್ಯರು ಆಸ್ತಿ ವಿವರ ಸಲ್ಲಿಸಲು ನಾಳೆ ಕಡೆ ದಿನ

ಈ ಸುದ್ದಿಯನ್ನು ಶೇರ್ ಮಾಡಿ

Vidhanasoudha--01
ಬೆಂಗಳೂರು, ಜೂ.29- ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಲು ನಾಳೆ ಕಡೆ ದಿನ. ಹದಿನೈದನೇ ವಿಧಾನಸಭೆಗೆ ಆಯ್ಕೆಯಾಗಿರುವ ಸದಸ್ಯರು 2017-18ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವದ ಪಟ್ಟಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕಾಗಿದೆ. ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿದ ಮಾಹಿತಿಯನ್ನು ವಿಧಾನಸಭೆ ಸಚಿವಾಲಯಕ್ಕೆ ತಿಳಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.

ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರು ಪ್ರತಿ ವರ್ಷ ತಮ್ಮ ಹಾಗೂ ತಮ್ಮ ಕುಟುಂಬದ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕಾಗಿದೆ. ಕರ್ನಾಟಕ ಲೋಕಾಯುಕ್ತ ಅಧಿನಿಯಮ 1984ರ ಕಲಂ 7ರ ಉಪಕಲಂ (1)ರಡಿ ಆಯಾ ವರ್ಷದ ಜೂನ್ 30ರೊಳಗೆ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕಾಗಿದೆ.

Facebook Comments

Sri Raghav

Admin