ಸೇನೆ ವಾಹನದ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ, ಎನ್‍ಕೌಂಟರ್’ನಲ್ಲಿ ಭಯೋತ್ಪಾದಕನ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Graned--01
ಶ್ರೀನಗರ, ಜೂ.29-ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಬಾಲ ಬಿಚ್ಚಿದ್ದಾರೆ. ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಉಗ್ರಗಾಮಿಗಳು ಸೇನೆ ಪಹರೆ ವಾಹನದ ಮೇಲೆ ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ. ಈ ದಾಳಿಯಲ್ಲಿ ಕೆಲ ಯೋಧರು ಗಾಯಗೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕುಪ್ವಾರದಲ್ಲಿ ಯೋಧರು ಎನ್‍ಕೌಂಟರ್‍ನಲ್ಲಿ ಉಗ್ರನೊಬ್ಬನನ್ನು ಹೊಡೆದುರುಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್‍ನ ಅಹಗಂ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಉಗ್ರರು ಗ್ರೆನೇಡ್ ಎಸೆದು ಪರಾರಿಯಾದರು. ಆದರೆ ಗ್ರೆನೇಡ್ ವಾಹನದಿಂದ ಸ್ವಲ್ಪ ದೂರದಲ್ಲಿ ಸ್ಫೋಟಗೊಂಡು ಭಾರೀ ಅನಾಹುತ ತಪ್ಪಿತು. ಆದರೆ, ಉಗ್ರರ ದುಷ್ಕøತ್ಯದಲ್ಲಿ ಕೆಲ ಯೋಧರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಪ್ರದೇಶವನ್ನು ಯೋಧರು ಸುತ್ತುವರಿದು, ತೀವ್ರ ಶೋಧ ಮುಂದುವರಿಸಿದ್ದಾರೆ. ಎನ್‍ಕೌಂಟರ್‍ನಲ್ಲಿ ಉಗ್ರಗಾಮಿ ಖತಂ : ಜಮ್ಮು ಮತ್ತು ಕಾಶ್ಮೀರ ಕುಪ್ವಾರ ಜಿಲ್ಲೆಯ ಅರಣ್ಯದಲ್ಲಿ ಇಂದು ಮುಂಜಾನೆ ಯೋಧರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ. ಕುಪ್ವಾರಾದ ಟ್ರೆಹ್ಗಾಮ್ ಪ್ರದೇಶದಲ್ಲಿ ಉಗ್ರರ ಚಲನ-ವಲನದ ಬಗ್ಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ಯೋಧರು ಆ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾಗ ಎನ್‍ಕೌಂಟರ್ ನಡೆಯಿತು. ಹತ ಉಗ್ರನಿಂದ ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

Facebook Comments

Sri Raghav

Admin