ರೈತರ ಸಲ ಮನ್ನಾಗೆ ಅಸ್ತು, : ಸಮನ್ವಯ ಸಮಿತಿ ಮಹತ್ವದ ನಿರ್ಧಾರಳು ಇಲ್ಲಿವೆ ನೋಡಿ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-and-Kumaraswam

ಬೆಂಗಳೂರು – ರಾಷ್ಟ್ರೀಯ ಹಾಗೂ ಸಹಕಾರಿ ಬ್ಯಾಂಕ್ಗಳಿಂದ ರೈತರು ಪಡೆದಿರುವ ಬೆಳೆ ಸಾಲ ಮನ್ನಾ ಮಾಡುವುದು, ಐದು ವರ್ಷದಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿ, ನೀರಾವರಿ ಇಲಾಖೆಗೆ 1.25 ಲಕ್ಷ ಕೋಟಿ ಅನುದಾನ ಹಿಂದಿನ ಸರಕಾರದ ಯೋಜನೆಗಳನ್ನು ಮುಂದುವರಿಸುವುದು ಸೇರಿದಂತೆ ಭಾನುವಾರ ನಡೆದ ಸಮನ್ವಯ ಸಮಿತಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ.

ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ನೀಡಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲು ನಿರ್ಧರಿಸಲಾಯಿತು.   ರಾಜ್ಯದ ರೈತರ ಸಾಲಮನ್ನಾ ವಿಷಯವಾಗಿ ಇದ್ದ ಗೊಂದಲಗಳು ನಿವಾರಣೆಯಾಗಿದೆ.   ಇದೇ 5ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಲಿರುವ ಬಜೆಟ್‌ನಲ್ಲಿ ರೈತರ ಸಾಲಮನ್ನಾ ಕುರಿತು ಘೋಷಣೆ ಮಾಡಲಿದ್ದಾರೆ.

ಭಾನುವಾರ ಬೆಂಗಳುರಿನಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ರೈತರ ಸಾಲಮನ್ನಾ ಕುರಿತಾದ ಸ್ಪಷ್ಟ ನಿರ್ಧಾರಕ್ಕೆ ಬರಲಾಯಿತು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹಠಕ್ಕೆ ಕೊನೆಗೂ ಮಣಿದ ಕಾಂಗ್ರೆಸ್‌ ಆರ್ಥಿಕ ಹೊರೆ ಆಗದ ರೀತಿಯಲ್ಲಿ ಸಾಲಮನ್ನಾ ಮಾಡಲು ಒಪ್ಪಿಗೆ ನೀಡಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಬುಧವಾರ ಮಂಡಿಸಲಿರುವ ಸಮ್ಮಿಶ್ರ ಸರ್ಕಾರ ಬಜೆಟ್ನಲ್ಲಿ ರೈತರ ಸಾಲವನ್ನು ಮಾಡಲು ಒಪ್ಪಿಗೆ ಸೂಚಿಸಲಾಗಿದೆ.

ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗದೆ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ರಾಷ್ಟ್ರೀಯ ಹಾಗೂ ಸಹಕಾರಿ ಬ್ಯಾಂಕ್ಗಳಿಂದ ರೈತರು ಪಡೆದಿರುವ ಸಾಲವನ್ನು ಸಾಲಮನ ಮಾಡುವುದಕ್ಕೆ ಸಮಿತಿಯು ಸಮ್ಮತಿ ನೀಡಿದೆ. ರೈತರ ಸಾಲ ಮನ್ನಾ ಮಾಡಬೇಕೆಂದು ಪಟ್ಟು ಹಿಡಿದಿದ್ದ ಜೆಡಿಎಸ್ ಈ ವಿಷಯದಲ್ಲಿ ಮೇಲುಗೈ ಸಾಧಿಸಿದೆ .  ಆದರೆ ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಯಾದ ಯಾವುದೇ ಕಾರ್ಯಕ್ರಮವನ್ನು ರದ್ದು ಮಾಡುವುದಾಗಲಿ ಇಲ್ಲವೇ ಕಡೆಗಣಿಸಿದ ಸಿದ್ದರಾಮಯ್ಯ ಕೂಡ ತನ್ನ ಪ್ರಭಾವ  ಬಳಸುವಲ್ಲಿ ಯಶಸ್ವಿಯಾಗಿದ್ದರೆ. ಸಾಲಮನ್ನಾ ಮಾಡಲು ಬೇಕಾದ ಸಂಪನ್ಮೂಲ ಕ್ರೋಡಿಕರಣಕ್ಕೆ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಪರಸ್ಪರ ಒಟ್ಟಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ.

ಇನ್ನು ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಗೆ ಐದು ವರ್ಷ ಅವಧಿಯಲ್ಲಿ ಒಂದು 1.25ಲಕ್ಷ ಕೋಟಿ ಅನುದಾನ ಮೀಸಲಿಟ್ಟು ಕೃಷ್ಣ ಹಾಗೂ ಕಾವೇರಿ ಕೊಳ್ಳದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಇನ್ನು ಐದು ವರ್ಷ ಅವಧಿಯಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಣಾಳಿಕೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು ಸೇರಿದಂತೆ ಇನ್ನು ಮುಂದೆ ಯಾವುದೇ ರೀತಿಯ ಭಿನ್ನಮತಕ್ಕೆ ಅವಕಾಶವಿಲ್ಲದಂತೆ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸಬೇಕೆಂಬ ತೀರ್ಮಾನವನ್ನು ಕೈಗೊಳ್ಳಲಾಗಿಯಿತು.

ಸಭೆಯ ನಂತರ ಸುದ್ದಿ ಗರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇವರು ಪರಸ್ಪರ ಚರ್ಚಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ನೀಡಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡಲಿದ್ದೇವೆ ಎಂದು ಹೇಳಿದರು.  ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ ಸಣ್ಣಪುಟ್ಟ ಗೊಂದಲಗಳನ್ನು ಬಗೆಹರಿಸಿಕೊಳ್ಳಲಾಗಿದೆ ಇನ್ನು ಮುಂದೆ ಯಾವುದೇ ರೀತಿಯ ಗೊಂದಲ ಇಲ್ಲವೇ ಅನುಮಾನಕ್ಕೆ ಆಸ್ಪದವಿಲ್ಲದಂತೆ ಜನರ ಸೊಳ್ಳೆಯಿಂದ ಆಡಳಿತ ನಡೆಸುತ್ತೇವೆ ಎಂದು ಹೇಳಿದರು.

ಭಿನ್ನಾಭಿಪ್ರಾಯ ಇಲ್ಲಿಗೆ ಮುಗಿದ ಕಥೆ ಯಾವುದೇ ಸಮಸ್ಯೆಗಳಿದ್ದರೂ ಸಮಿತಿ ಸಭೆಯಲ್ಲಿ ಚರ್ಚಿಸಿ ನಡೆಸಲಾಗುವುದು.ಸಾಮಾನ್ಯ ಕನಿಷ್ಠ ಕಾರ್ಯಕ್ರಮ ನೀಡಿದ ಸಮಿತಿಯು ನೀಡಿರುವ ವರದಿಯನ್ನು ಯಥಾವತ್ತಾಗಿ ಬಜೆಟ್ನಲ್ಲಿ ಸೇರ್ಪಡೆ ಮಾಡಲಾಗುವುದು ಸಾಲಮನ್ನಾ ಸೇರಿದಂತೆ ಯಾವುದೇ ವಿಷಯದಲ್ಲೂ ಉಭಯ ಪಕ್ಷಗಳ ನಡುವೆ ಗೊಂದಲ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಶೀಘ್ರದಲ್ಲಿ ಶಾಸಕರ ಬೇಡಿಕೆಯನ್ನು ಪರಿಗಣಿಸುತ್ತೇವೆ ಎಂದರು.ಬಜೆಟ್ನಲ್ಲಿ ಘೋಷಣೆ ಮಾಡುವ ಕಾರ್ಯಕ್ರಮಗಳ ಬಗ್ಗೆ ಈಗಲೇ ಬಹಿರಂಗ ಪಡಿಸಲಾಗುವುದು ಕೆಲವು ವಿಷಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

ಸಭೆಯ ನಂತರ ಮಾಧ್ಯಮಗಳಿಗೆ ವಿವರ ನೀಡಿದ ಡ್ಯಾನಿಷ್ ಅಲಿ, “ಸಭೆಯಲ್ಲಿ ರೈತರ ಬೆಳೆ ಸಾಲ ಮನ್ನಾಕ್ಕೆ ಒಪ್ಪಿಗೆ ನೀಡಲಾಯಿತು. ಮುಂದಿನ 5 ವರ್ಷದಲ್ಲಿ ನಿವೇಶನ ರಹಿತರಿಗೆ 20 ಲಕ್ಷ ಮನೆ ನಿರ್ಮಾಣ ಗುರಿ ಹಾಕಿಕೊಳ್ಳಲಾಗಿದೆ,” ಎಂದು ಹೇಳಿದರು. 5 ವರ್ಷದಲ್ಲಿ 1 ಕೋಟಿ ಹೊಸ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುತ್ತದೆ. ಕಾಂಗ್ರೆಸ್ ಸರಕಾರ ಜಾರಿಗೆ ತಂದಿದ್ದ ಆರೋಗ್ಯ ಕರ್ನಾಟಕ ಯೋಜನೆ ಜಾರಿ ಮಾಡಲಾಗುತ್ತದೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಬಗ್ಗೆಯೂ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಿತು,” ಎಂದು ವಿವರ ನೀಡಿದರು.

“ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಎಲ್ಲಾ ಜನಪ್ರಿಯ ಯೋಜನೆಗಳನ್ನು ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ 5 ವರ್ಷಗಳಲ್ಲಿ ನೀರಾವರಿ ಯೋಜನೆಗಳಿಗಾಗಿ 1.25 ಲಕ್ಷ ಕೋಟಿ ಅನುದಾನ ಮೀಸಲಿಡಲಾಗುತ್ತದೆ. ಹೊಸ ಕ್ರೀಡಾ ನೀತಿಯನ್ನೂ ಸರಕಾರ ಜಾರಿಗೆ ತರಲಿದೆ ಎಂದು ಅವರು ತಿಳಿಸಿದರು. ಇನ್ನು ಸಂಪುಟ ವಿಸ್ತರಣೆ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದ ಡ್ಯಾನಿಷ್ ಅಲಿ, ಉಳಿದ ವಿವರಗಳ ಬಗ್ಗೆ ಬಜೆಟ್ ನಲ್ಲಿ ತಿಳಿಯಲಿದೆ. ಸದ್ಯದಲ್ಲೇ ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ ಎಂದರು.  ಸಭೆಯಲ್ಲಿ ಮುಖ್ಯಮಂತ್ರಿ ಮಾಜಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಜೆಡಿಎಸ್ ನಾಯಕ ಡ್ಯಾನಿಷ್ ಅಲಿ ಪಾಲ್ಗೊಂಡಿದ್ದರು.

Facebook Comments

Sri Raghav

Admin