ದೆಹಲಿಯ ಮನೆಯೊಂದರಲ್ಲಿ ಒಂದೇ ಕುಟುಂಬದ 11 ಮಂದಿ ಸಂಶಯಾಸ್ಪದ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

11-Killed-01

ನವದೆಹಲಿ, ಜು.1- ರಾಷ್ಟ್ರ ರಾಜಧಾನಿಯಲ್ಲಿ ಬುರಾರಿ ಪ್ರದೇಶದ ಮನೆಯೊಂದರಲ್ಲಿ ಒಂದೇ ಕುಟುಂಬದ 11 ಮಂದಿ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಇದು ಪತ್ತೆಯಾಗಿದ್ದು , ಮೃತರಲ್ಲಿ 7 ಮಂದಿ ಮಹಿಳೆಯರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 10 ಮಂದಿಯ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದರೆ, ಒಬ್ಬ ಮಹಿಳೆ ಮಹಡಿಯ ಬಳಿ ಸತ್ತು ಬಿದ್ದಿರುವ ದೇಹ ಪತ್ತೆಯಾಗಿದೆ.  ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ಕೈಗೊಂಡಿದ್ದು , ಮನೆಯಲ್ಲಿ ಯಾವುದೇ ರೀತಿಯ ಡೆತ್‍ನೋಟ್ ಸಿಕ್ಕಿಲ್ಲ. ಮತ್ತು ಅನುಮಾನಾಸ್ಪದ ವಸ್ತುಗಳು ಕೂಡ ಪತ್ತೆಯಾಗಿಲ್ಲ. ಒಟ್ಟಾರೆ ಈ ಪ್ರಕರಣ ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಉತ್ತರ ದೆಹಲಿ ಭಾಗಕ್ಕೆ ಬರುವ ಈ ಪ್ರದೇಶದಲ್ಲಿ ಮಧ್ಯಮ ವರ್ಗದ ಜನರೇ ಹೆಚ್ಚಾಗಿ ವಾಸಿಸುತ್ತಿದ್ದು , ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

Facebook Comments

Sri Raghav

Admin