ಅಪ್ರಾಪ್ತರು ಸಂಚಾರಿ ನಿಯಮ ಉಲ್ಲಂಘಿಸಿ ಓಡಿಸುತ್ತಿದ್ದ 100ಕ್ಕೂ ಹೆಚ್ಚು ಬೈಕ್ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Bike--01

ತುಮಕೂರು, ಜು.1- ಅಪ್ರಾಪ್ತ ಬಾಲಕ-ಬಾಲಕಿಯರು ಸಂಚಾರಿ ನಿಯಮ ಉಲ್ಲಂಘಿಸಿ ವಾಹನಗಳನ್ನು ಚಾಲನೆ ಮಾಡುವುದು ಕಂಡು ಬರುತ್ತಿದ್ದು , ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ವಾಹನ ನೀಡುವ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ. ಇಂದು ವಿಶೇಷ ಕಾರ್ಯಾಚರಣೆ ನಡೆಸಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ವಾಹನ ಓಡಿಸುವುದನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ಪಕ್ಕದಲ್ಲಿರುವ ಚಿಲುಮೆ ಸಮುದಾಯ ಆವರಣದಲ್ಲಿ ನೂರಕ್ಕೂ ಹೆಚ್ಚು ಬೈಕ್‍ಗಳನ್ನು ಇಂದು ವಶಕ್ಕೆ ಪಡೆಯಲಾಗಿದೆ. ವಾಹನದ ವಿಮೆ, ಮೂಲ ದಾಖಲೆಗಳು, ಚಾಲನಾ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲೆಗಳನ್ನು ಪರಿಶೀಲಿಸಲಾಗಿದೆ. ದ್ವಿಚಕ್ರ ವಾಹನಗಳನ್ನು ಅತಿ ವೇಗವಾಗಿ ಓಡಿಸುವುದರಿಂದ ಅಪಘಾತಗಳು ನಡೆಯುತ್ತಿದ್ದು , ಅಮಾಯಕ ಜೀವಗಳು ಬಲಿಯಾಗುತ್ತಿವೆ. ಇದಲ್ಲದೆ ಅಡ್ಡಾದಿಡ್ಡಿ ವಾಹನ ಚಲಿಸುವುದರಿಂದ ಇತರೆ ವಾಹನ ಸವಾರರಿಗೂ ತೊಂದರೆಯಾಗುತ್ತಿದೆ. ಇದನ್ನು ಮನಗಂಡು ಪೋಷಕರಿಗೆ ಎಚ್ಚರಿಕೆ ನೀಡಿ ಮುಂದೆ ಹೀಗೆ ಮಾಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿ ಹೇಳುವಂತಹ ಕಾರ್ಯಕ್ರಮವನ್ನು ಮಾಡಿದ್ದೇವೆ ಎಂದು ವೃತ್ತ ನಿರೀಕ್ಷಕ ಚಂದ್ರಶೇಖರ್ ತಿಳಿಸಿದರು.

Facebook Comments

Sri Raghav

Admin