ಸಾಲ ಮನ್ನಾ ವಿಚಾರದಲ್ಲಿ ಮೋಸ ಕಂಡುಬಂದರೆ ಕಠಿಣ ಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

Bndeppa-01

ಬೆಂಗಳೂರು, ಜು.2-ಸಾಲ ಮನ್ನಾ ಪ್ರಯೋಜನ ನೇರವಾಗಿ ರೈತರಿಗೆ ತಲುಪಬೇಕಾಗಿದ್ದು, ಒಂದು ವೇಳೆ ಸಾಲ ಮನ್ನಾ ವಿಚಾರದಲ್ಲಿ ಮೋಸ ಮಾಡಿರುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ ಪರವಾಗಿ ವಿಶೇಷ ಕಾಳಜಿ ವಹಿಸಿದೆ. ಜನರ ತೆರಿಗೆ ಹಣ ಸದ್ಬಳಕೆಯಾಗಲಿದೆ. ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಬದ್ಧವಾಗಿದ್ದು, ಒಂದು ವೇಳೆ ಯಾರಾದರೂ ಬೋಗಸ್ ಅಥವಾ ಮೋಸ ಮಾಡಿರುವುದು ಕಂಡು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ತೆರಿಗೆ ಹಣ ಸದ್ಬಳಕೆಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ರೈತರ ಸಾಲ ಮನ್ನಾ ವಿಚಾರದಲ್ಲಿ ಯಾವುದೇ ಅಧಿಕಾರಿಗಳು ತಪ್ಪು ಮಾಡಿರುವುದು ಕಂಡು ಬಂದರೆ ಅವರ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

Facebook Comments

Sri Raghav

Admin