ಕಂಟೈನರ್ – ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--01

ಚಿತ್ರದುರ್ಗ, ಜು.2- ಕಂಟೈನರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ , ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾಡನಾಯಕನಹಳ್ಳಿ ಬಳಿ ಕಳೆದ ರಾತ್ರಿ ಸಂಭವಿಸಿದೆ.ಚಾಮರಾಜನಗರ ಜಿಲ್ಲೆಯ ಕೊರಮ ಘಟ್ಟ ಗ್ರಾಮದ ನಿವಾಸಿಗಳಾದ ನೆವಿಲ್ (26) , ಮಂದಾರ (20), ರುಕ್ಮಿಣಿ (19) ಮೃತಪಟ್ಟ ದುರ್ದೈವಿಗಳು.

ಮುದೋಳದಲ್ಲಿ ನಡೆದಿದ್ದ ಸಂಬಂಧಿಕರ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಮುಂದೆ ಚಲಿಸುತ್ತಿದ್ದ ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ , ಮಹೇಂದ್ರ ಮತ್ತು ಮನೋಹರ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು , ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಪಿಎಸ್‍ಐ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದ್ದು , ಪೊಲೀಸರು ಹರಸಾಹಸ ಪಟ್ಟು ಶವಗಳನ್ನು ಹೊರ ತೆಗೆಯಲಾಯಿತು. ಈ ಸಂಬಂಧ ತುರುವನೂರು ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin