ರೈತರ ಸಾಲ ಮನ್ನಾ ಮಾದರಿಯಲ್ಲೇ ಮೀನುಗಾರರ ಸಾಲ ಮನ್ನಾಕ್ಕೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Raghupati-bhat--01
ಬೆಂಗಳೂರು, ಜು.3-ರೈತರ ಸಾಲ ಮನ್ನಾ ಮಾಡುವ ರೀತಿಯಲ್ಲೇ ಮೀನುಗಾರರ ಸಾಲ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ರಘುಪತಿಭಟ್ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಉಡುಪಿ ಜಿಲ್ಲೆಯ ಮೀನುಗಾರರ ಸಂಘದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮೀನುಗಾರರ ಸಾಲ ಮನ್ನಾ ಮಾಡುವ ವಿಚಾರದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

Mangaluru--01

ಮೀನುಗಾರರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಮುಖ್ಯಮಂತ್ರಿಗಳಿಗೆ ನಿಯೋಗ ಮನವಿ ಮಾಡಿದೆ ಎಂದು ತಿಳಿಸಿದರು. ಮಂಗಳೂರು, ಉಡುಪಿ, ಕಾರವಾರ ಜಿಲ್ಲೆಯ ಶಾಸಕರು ನಿಯೋಗದಲ್ಲಿ ಇದ್ದರು.

Facebook Comments

Sri Raghav

Admin