ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತೆ : ಗಡ್ಕರಿ ಭವಿಷ್ಯ

ಈ ಸುದ್ದಿಯನ್ನು ಶೇರ್ ಮಾಡಿ

Nitin-Ghadkari--02
ಮುಂಬೈ, ಜು.3- ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟಾಗುತ್ತಿರುವುದನ್ನು ನೋಡಿದರೆ ನಮ್ಮ ಪಕ್ಷ ಪ್ರಬಲವಾಗಿದೆ ಎಂಬುದರ ಧ್ಯೋತಕ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಸಾಮಥ್ರ್ಯದಿಂದ ಭೀತಿಗೊಂಡಿರುವ ಪ್ರತಿಪಕ್ಷಗಳು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ. ಆದರೆ ದೇಶದ ಮತದಾರರು ನಮ್ಮ ಪಕ್ಷವನ್ನು ಕೈ ಬಿಡಲಾರರು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿಯ ಮಿತ್ರ ಪಕ್ಷವಾಗಿರುವ ಶಿವಸೇನೆ ಮುನಿಸನ್ನು ಅಂತ್ಯಗೊಳಿಸಲಾಗುವುದು. ಮುಂಬರುವ ಚುನಾವಣೆಯಲ್ಲಿ ಆ ಪಕ್ಷದೊಂದಿಗಿನ ಮೈತ್ರಿ ಮುಂದುವರೆಸಲಾಗುವುದು ಎಂದು ಅವರು ಹೇಳಿದರು.

ಒಬ್ಬ ಬಲಿಷ್ಠ ವ್ಯಕ್ತಿಯ ವಿರುದ್ಧ ಇತರರು ಒಗ್ಗೂಡುವುದು ಮಾಮೂಲು. ಅದೇ ರೀತಿ ಪ್ರತಿಪಕ್ಷಗಳ ಒಗ್ಗೂಡುವಿಕೆಯನ್ನು ಗಮನಿಸಿದರೆ ಪ್ರಧಾನಿ ನರೇಂದ್ರ ಮೋದಿ ಬಲಿಷ್ಠ ವ್ಯಕ್ತಿ ಎನ್ನುವುದನ್ನು ಸಾಬೀತು ಪಡಿಸುತ್ತದೆ ಎಂದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ಪ್ರತಿಪಕ್ಷ ಸ್ಥಾನದಲ್ಲಿ ಕೂರಲು ನಾವು ಸಿದ್ಧ ಎಂದು ಘೋಷಿಸಿದರು.

Facebook Comments

Sri Raghav

Admin