ಖಾಸಗಿ ಕೃಷಿ ವಿವಿಗಳ ಸಮಸ್ಯೆಗಳ ಪರಿಹಾರಕ್ಕಾಗಿ ಸದ್ಯದಲ್ಲೇ ಕಾಯ್ದೆ ಜಾರಿ

ಈ ಸುದ್ದಿಯನ್ನು ಶೇರ್ ಮಾಡಿ

G-T-Devegowda--01

ಬೆಂಗಳೂರು, ಜು.4-ಖಾಸಗಿ ಕೃಷಿ ವಿಶ್ವವಿದ್ಯಾಲಯದ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕಾಗಿ ಕಾಯ್ದೆ ರೂಪಿಸಲಾಗಿದ್ದು , ಸದ್ಯದಲ್ಲೇ ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ವಿಧಾನಪರಿಷತ್‍ನಲ್ಲಿ ತಿಳಿಸಿದರು. ಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಅವರು ನಿಯಮ 330ರಡಿ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬೆಂಗಳೂರು, ಧಾರವಾಡ,ರಾಯಚೂರು ಕೃಷಿ ವಿವಿಯಗಳಲ್ಲಿ ಆಗಿರುವ ಅನ್ಯಾಯ, ಎದುರಿಸುತ್ತಿರುವ ಸಮಸ್ಯೆಗಳು ಎಲ್ಲವುಗಳನ್ನು ಸರಿಪಡಿಸುವ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯೊಂದಿಗೆ ಚರ್ಚಿಸಿ ಒಂದು ಕಾಯ್ದೆ ರೂಪಿಸಲಾಗಿದೆ. ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಕಳೆದ 20 ದಿನಗಳಿಂದ ತರಗತಿ ಬಹಿಷ್ಕರಸಿ ವಿದ್ಯಾರ್ಥಿಗಳು ಖಾಸಗಿ ಕೃಷಿ ವಿವಿಗಳಲ್ಲಿ ಆಗುತ್ತಿರುವ ಅನ್ಯಾಯ ಕುರಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಬಡ ಪ್ರತಿಭಾವಂತ ರೈತಾಪಿ ಮಕ್ಕಳು ಕೃಷಿ ವಿವಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಖಾಸಗಿ ಕೃಷಿ ವಿವಿ ಕಾಲೇಜುಗಳಿಗೆ ದುಬಾರಿ ಶುಲ್ಕ ನಿಗದಿಪಡಿಸುತ್ತಿರುವುದು ಗಮನಕ್ಕೆ ಬಂದಿದ್ದು, ಕೃಷಿ ವಿವಿ ವಿದ್ಯಾರ್ಥಿಗಳ ಹಿತ ಕಾಯುವ ದೃಷ್ಟಿಯಿಂದ ಅಗತ್ಯಕ್ರಮ ಕೈಗೊಳ್ಳುವ ಬಗ್ಗೆ ಕಾಯ್ದೆ ಜಾರಿ ಮಾಡಲಾಗುವುದು ಎಂದು ಹೇಳಿದರು.

Facebook Comments

Sri Raghav

Admin