ರಸ್ತೆ ಅಭಿವೃದ್ಧಿಗೆ ಸಮಗ್ರ ಒತ್ತುನೀಡಲಾಗುವುದು : ಸಚಿವ ಎಚ್.ಡಿ.ರೇವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

HD-Revanna

ಬೆಂಗಳೂರು, ಜು.4- ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕೀಯ ಬೇಡ. ಮುಂದಿನ ಎರಡು ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ಇದೆ. ಅಲ್ಲಿ ರಸ್ತೆ ಅಭಿವೃದ್ಧಿ ಬಗ್ಗೆ ಚರ್ಚಿ ಸಲಾಗುವುದು. ಯಾವುದೇ ಬೇಡಿಕೆಯಿದ್ದರೆ ಪೂರೈಸುತ್ತೇವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಭರವಸೆ ನೀಡಿದರು.

ನಿಯಮ-72ರಡಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಅವರು ಮಂಡಿಸಿದ ಗಮನ ಸೆಳೆವ ಸೂಚನೆಗೆ ಉತ್ತರಿಸಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಜನ ಏನು ಕೇಳುತ್ತಾರೆ, ಉತ್ತಮ ರಸ್ತೆ, ಬ್ರಿಡ್ಜ್, ಕುಡಿಯುವ ನೀರು ಕೇಳುತ್ತಾರೆ ಅಷ್ಟೆ. ಅವುಗಳನ್ನು ಒದಗಿಸಿಕೊಡುವುದು ನಮ್ಮ ಕರ್ತವ್ಯ ಎಂದರು. ಯುಪಿಎ-ಎನ್‍ಡಿಎ ಎಂದು ಯಾವುದೇ ರಾಜಕೀಯದ ಮಾತು ಬೇಡ. ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ಇದೆ. ಯಾವುದೇ ಬೇಡಿಕೆಯಿದ್ದರೆ ಚರ್ಚಿಸಿ ಬಗೆಹರಿಸುವುದಾಗಿ ಭರವಸೆ ನೀಡಿದರು. ಹಿಂದಿನ ಯುಪಿಎ ಸರ್ಕಾರ ರಸ್ತೆ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದೆ. ಈಗಿನ ಎನ್‍ಡಿಎ ಸರ್ಕಾರವೂ ಕೂಡ ನೆರವು ನೀಡಿದೆ ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-169ರ ಗುರುಪುರ ಸೇತುವೆ ನದಿ ಪ್ರವಾಹ ಮತ್ತು ಹೆಚ್ಚಿನ ನೀರು ಹರಿವಿರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ ದುರಸ್ತಿಗೆ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಕೂಲಂಕಶವಾಗಿ ಪರಿಶೀಲಿಸಿ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂದರು. ಅಲ್ಲದೆ, 38 ಕೋಟಿ ರೂ. ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಿಸುವ ಪ್ರಸ್ತಾಪವನ್ನು ಈಗಾಗಲೇ ತಯಾರಿಸಿ ಅನುಮೋದನೆಗಾಗಿ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಅವರು ಹೇಳಿದರು.

Facebook Comments

Sri Raghav

Admin