ಬಜೆಟ್ ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

Bengaluru--01

# ಮೆಟ್ರೋ ರೈಲು ಸಂಚಾರ ವಿಸ್ತರಣೆ :

ಬೆಂಗಳೂರು, ಜು.5- ನಗರದ ವಾಹನ ದಟ್ಟಣೆಯನ್ನು ಸುಧಾರಿಸುವಲ್ಲಿ ಮೆಟ್ರೋ ರೈಲು ಸಂಚಾರ ಸಹಕಾರಿಯಾಗಿರುವುದನ್ನು ಮನಸ್ಸಿನಲ್ಲಿಟ್ಟುಕೊಂಡು ರೈಲು ಸಂಚಾರವನ್ನು ವಿಸ್ತರಿಸಲು ಬಜೆಟ್‍ನಲ್ಲಿ ಆದ್ಯತೆ ನೀಡಲಾಗಿದೆ. ನಮ್ಮ ಮೆಟ್ರೋ ರೈಲು ಯೋಜನೆಯ ಹಂತ-3ರಲ್ಲಿ ಜೆಪಿ ನಗರದಿಂದ ಕೆಆರ್ ಪುರಂವರೆಗಿನ 42.75ಕಿಮೀ, ಟೋಲ್ಗೇಟ್‍ನಿಂದ ಕಡಬಗೆರೆವರೆಗಿನ 12.5ಕಿಮೀ, ಗೊಟ್ಟಿಗೆರೆಯಿಂದ ಬಸವನಪುರವರೆಗಿನ 3.07ಕಿಮೀ, ಆರ್‍ಕೆ ಹೆಗಡೆ ನಗರದಿಂದ ಏರೋಸ್ಪೇಸ್ ಪಾರ್ಕ್‍ವರೆಗಿನ 18.95ಕಿಮೀವರೆಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ.   ಅದೇ ರೀತಿ ಕೋಗಿಲು ಕ್ರಾಸ್‍ನಿಂದ ರಾಜಾನುಕುಂಟೆವರೆಗೆ, ಇಬ್ಬಲೂರಿನಿಂದ ಕರ್ಮಲ್‍ರಾಮ್‍ವರೆಗೆ ರೈಲು ಸಂಚಾರವನ್ನು ವಿಸ್ತರಿಸುವುದರ ಜತೆಗೆ ಒಟ್ಟಾರೆ ಮೂರನೆ ಹಂತದ ಯೋಜನೆಯಲ್ಲಿ 95ಕಿಮೀವರೆಗೂ ಮೆಟ್ರೋ ರೈಲು ಸಂಚಾರವನ್ನು ವಿಸ್ತರಿಸಲು ಅಧ್ಯಯನ ನಡೆಸಲಾಗುತ್ತಿದೆ.

*****************

# ಸಂಚಾರ ದಟ್ಟಣೆ ಸುಧಾರಣೆಗೆ 6 ಎಲಿವೇಟೆಡ್ ಕಾರಿಡಾರ್ :
ಬೆಂಗಳೂರು, ಜು.5- ಭವಿಷ್ಯದಲ್ಲಿ ಬೆಂಗಳೂರಿನ ಸಾರಿಗೆ ಸಂಪರ್ಕವನ್ನು ಉತ್ತಮಗೊಳಿಸುವ ಉದ್ದೇಶದಿಂದ ನಗರದ ಸುತ್ತ ಆರು ಎಲಿವೇಟೆಡ್ ಕಾರಿಡಾರ್‍ಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಜೆಟ್‍ನಲ್ಲಿ ಸ್ಪಷ್ಟಪಡಿಸಿದ್ದಾರೆ.ವಿಶ್ವದ ಸಿಲಿಕಾನ್ ಸಿಟಿ ಎಂಬ ಖ್ಯಾತಿ ಹೊಂದಿರುವ ಬೆಂಗಳೂರಿನಲ್ಲಿ ಸಂಚಾರಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ನಾಲ್ಕು ವರ್ಷಗಳಲ್ಲಿ ಹೈಬ್ರೀಡ್ ಅನ್ಯೂಟಿ ಪ್ರಕಾರದಲ್ಲಿ 15,825 ಕೋಟಿ ರೂ.ಗಳಲ್ಲಿ ಕಾರಿಡಾರ್‍ಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ.ಬೆಂಗಳೂರು ಮೆಟ್ರೋ ಯೋಜನೆಯನ್ನು ಗಮನದಲ್ಲಿಟ್ಟುಕೊಂಡು ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡಲಾಗುತ್ತಿದ್ದು, ಬೆಂಗಳೂರಿನ ಸಂಪರ್ಕ ವ್ಯವಸ್ಥೆಗೆ ಇದು ಅತ್ಯುತ್ತಮ ಕೊಡುಗೆಯಾಗಿರುತ್ತದೆ.
ಕಾರಿಡಾರ್ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ ಸಾವಿರ ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದ್ದು, ಕೆಆರ್‍ಡಿಸಿಎಲ್ ಸಂಸ್ಥೆಯಿಂದ ಯೋಜನೆಯನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ.

*****************

# ಪೀಣ್ಯದಲ್ಲಿ ರಾಸಾಯನಿಕ ತ್ಯಾಜ್ಯ ವಸ್ತು ಶುದ್ಧೀಕರಣ ಘಟಕ..
ಬೆಂಗಳೂರು, ಜು.5- ಪೀಣ್ಯ ಕೈಗಾರಿಕಾ ವಲಯದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ರಾಸಾಯನಿಕ ತ್ಯಾಜ್ಯ ವಸ್ತುಗಳ ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ನಗರದ ಕೊಳಚೆ ನೀರಿನಲ್ಲಿ ಹೆಚ್ಚುತ್ತಿರುವ ರಾಸಾಯನಿಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಆ ನೀರನ್ನು ಶುದ್ಧೀಕರಿಸುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಐತಿಹಾಸಿಕ ಮೈಸೂರು ನಗರ ಹಾಗೂ ಮಾರ್ಗಮಧ್ಯದ 92 ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕಾವೇರಿ ನದಿಯಿಂದ ಹೆಚ್ಚುವರಿಯಾಗಿ 300 ಎಂಎಲ್‍ಡಿ ನೀರನ್ನು ಸರಬರಾಜು ಮಾಡಲು ಆಯವ್ಯಯದಲ್ಲಿ 50 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ರಾಜ್ಯದ ನ್ಯಾಯಾಂಗ ಪರಂಪರೆಯನ್ನು ಜನಸಾಮಾನ್ಯರಿಗೆ ಪರಿಚಯಿಸುವ ಉದ್ದೇಶದಿಂದ ಅಮೂಲ್ಯ ದಾಖಲೆಗಳು ಮತ್ತು ಚಿತ್ರಗಳನ್ನೊಳಗೊಂಡ ನ್ಯಾಯಾಂಗ ಮ್ಯೂಜಿಯಂ ಸ್ಥಾಪನೆಗೆ 1 ಕೋಟಿ ರೂ. ಅನುದಾನ ಹಾಗೂ ಬೆಂಗಳೂರು ಬಾರ್‍ಕೌನ್ಸಿಲ್ ಕಾರ್ಯಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬಜೆಟ್‍ನಲ್ಲಿ 5 ಕೋಟಿ ರೂ.ಗಳ ಆರ್ಥಿಕ ನೆರವು ಪ್ರಕಟಿಸಲಾಗಿದೆ.

*****************
# ಏಕೀಕೃತ ಭೂ ಸಾರಿಗೆ ಪ್ರಾಧಿಕಾರ ರಚನೆ..
ಬೆಂಗಳೂರು, ಜು.5- ನಗರದ ಸಾರಿಗೆ ಸೇವೆಯ ಸಮಗ್ರ ಸುಧಾರಣೆಗಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಏಕೀಕೃತ ಭೂ ಸಾರಿಗೆ ಪ್ರಾಧಿಕಾರ ರಚನೆಯಾಗಲಿದೆ. ಬಿಎಂಆರ್‍ಸಿಎಲ್, ಬಿಎಂಟಿಸಿ, ಬಿಡಿಎ, ಬಿಬಿಎಂಪಿ ಸಂಸ್ಥೆಗಳ ನಡುವೆ ಸಮನ್ವಯ ವಹಿಸಿ ಕೈಗೆಟಕುವ ದರದಲ್ಲಿ ಅಡೆ-ತಡೆಗಳಿಲ್ಲದ ಅನುಕೂಲಕರ ಸಾರಿಗೆ ವ್ಯವಸ್ಥೆ ಕಲ್ಪಿಸುವುದೇ ಈ ಪ್ರಾಧಿಕಾರದ ಉದ್ದೇಶ.  ಸಾರ್ವಜನಿಕರ ಉಪಯೋಗಕ್ಕಾಗಿ 4236 ಹೊಸ ಬಸ್‍ಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ. ಇದರ ಜತೆಗೆ 80 ಎಲೆಕ್ಟ್ರಿಕ್ ಬಸ್‍ಗಳನ್ನು ಓಡಿಸಲು ಚಿಂತನೆ ನಡೆಸಲಾಗಿದೆ. ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿವಾರಿಸಿಕೊಂಡು ಉತ್ತಮ ಸಾರಿಗೆ ಸೇವೆ ಒದಗಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 100 ಕೋಟಿ ರೂ.ಗಳ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ. ಏರುತ್ತಿರುವ ವಾಯುಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಎಲೆಕ್ಟ್ರಾನಿಕ್ ವಾಹನಗಳ ಬಳಕೆಯನ್ನು ಪೆÇ್ರೀತ್ಸಾಹಿಸಲು 4 ಕೋಟಿ ರೂ. ವೆಚ್ಚದಲ್ಲಿ 100 ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ.

Facebook Comments

Sri Raghav

Admin