ಸರ್ಕಾರಿ ಜಾಗದಲ್ಲಿ ಧಾರ್ಮಿಕ ಚಟುವಟಿಕೆ ಅವಕಾಶ ಪ್ರಶ್ನೆ ಇತ್ಯರ್ಥ ಬೃಹತ್ ಪೀಠಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Supreme-Court

ನವದೆಹಲಿ, ಜು.6-ಭಾರತದಂಥ ಜಾತ್ಯತೀತ ದೇಶದಲ್ಲಿ ಸರ್ಕಾರಿ ಭೂಮಿ ಅಥವಾ ಸ್ವತ್ತಿನಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ನೀಡಬಹುದೇ ಎಂಬ ಪ್ರಶ್ನೆಯನ್ನು ಇತ್ಯರ್ಥಗೊಳಿಸಲು ಸುಪ್ರೀಂಕೋರ್ಟ್ ಪ್ರಕರಣವನ್ನು ಬೃಹತ್ ಪೀಠಕ್ಕೆ ವರ್ಗಾಯಿಸಿದೆ.  ಜ್ಯೋತಿ ಜಾಗ್ರಣ್ ಮಂಡಲ್ ಎಂಬ ಸಂಸ್ಥೆ ಈ ಸಂಬಂಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್ ಮತ್ತು ಇಂದೂ ಮಲ್ಹೋತ್ರಾ ಅವರನ್ನು ಒಳಗೊಂಡ ಪೀಠವು ಈ ಪ್ರಕರಣವನ್ನು ಬಗೆಹರಿಸಲು ಬೃಹತ್ ಪೀಠಕ್ಕೆ ವರ್ಗಾಯಿಸಿದೆ. ದೆಹಲಿಯಲ್ಲಿ ಉದ್ಯಾನವನವೊಂದರಲ್ಲಿ ಜಾಗ್ರಣ್ ಮತ್ತು ಮಾತಾ ಕಿ ಚೌಕಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಪೌರಾಡಳಿತ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಂಸ್ಥೆಯು ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಪೀಠವು ಇದೊಂದು ಬಹು ಮುಖ್ಯ ಪ್ರಶ್ನೆಯಾಗಿದೆ. ಭಾರತವು ಜಾತ್ಯತೀತ ದೇಶ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ (ಸರ್ಕಾರದ ಭೂಮಿ ಅಥವಾ ಸ್ವತ್ತುಗಳು) ಇಂಥ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಬೇಕೆ ಅಥವಾ ಬೇಡವೇ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಇತ್ಯರ್ಥಕ್ಕಾಗಿ ಪ್ರಕರಣವನ್ನು ದೊಡ್ಡ ಪೀಠಕ್ಕೆ ವರ್ಗಾವಣೆ ಮಾಡುವುದಾಗಿ ತಿಳಿಸಿದೆ.

Facebook Comments

Sri Raghav

Admin