ಮದುವೆಗೆ ಒಪ್ಪದ ಮನೆಯವರು, ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಈ ಸುದ್ದಿಯನ್ನು ಶೇರ್ ಮಾಡಿ

Lovers--01

ಮಂಡ್ಯ,ಜು.6- ಮನೆಯವರಿಂದ ಮದುವೆಗೆ ವಿರೋಧವಿದ್ದುದ್ದರಿಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಚ್.ಡಿಕೋಟೆ ತಾಲ್ಲೂಕಿನ ಯಡಿಯಾಳ ಗ್ರಾಮದ ನಿವಾಸಿಗಳಾದ ಶಿವು(19)ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಹುಡುಗಿ ಹೆಸರು ತಿಳಿದುಬಂದಿಲ್ಲ. ಶಿವು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನ್ನು. ಇಬ್ಬರು ಮದುವೆಯಾಗಲು ನಿಶ್ಚಯಿ ಸಿದ್ದರು. ಆದರೆ ಇಬ್ಬರ ಮನೆಯಲ್ಲೂ ಮದುವಿಗೆ ವಿರೋಧ ವ್ಯಕ್ತವಾದುದ್ದರಿಂದ ಶ್ರೀರಂಗಪಟ್ಟಣ ತಾಲ್ಲೂಕಿನ ಚಿಕ್ಕಯ್ಯನಹಳ್ಳಿ ಹೊರ ವಲಯದ ದೇವಸ್ಥಾನದ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಈ ವೇಳೆ ಶಿವು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ತೀವ್ರ ಅಸ್ವಸ್ಥಳಾಗಿದ್ದ ಯುವತಿಯನ್ನು ಕಂಡ ಗ್ರಾಮಸ್ಥರು ಆಕೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ. ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin