ಸಿಎಂ ತಾಳ್ಮೆಯಿಂದ ಉತ್ತರಿಸುವುದನ್ನು ಕಲಿತುಕೊಳ್ಳಬೇಕು : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Eshwarappa vs Kumaraswamy

ಶಿವಮೊಗ್ಗ,ಜು.7- ರಾಜ್ಯ ಬಜೆಟ್ ವೈಫಲ್ಯದ ಬಗ್ಗೆ ಪ್ರಶ್ನೆ ಕೇಳಿದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಾಳ್ಮೆಯಿಂದ ಉತ್ತರಿಸಬೇಕು. ಅದನ್ನು ಬಿಟ್ಟು ಆಕ್ರೋಶ ವ್ಯಕ್ತಪಡಿಸಬಾರದು ಎಂದು ಬಿಜೆಪಿ ಹಿರಿಯ ಸದಸ್ಯ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬಜೆಟ್‍ನ ನ್ಯೂನತೆಗಳ ಬಗ್ಗೆ ಮಾತನಾಡಿದ್ದೇವೆ ಹೊರತು, ಅವರ ವೈಯಕ್ತಿಕ ವಿವರಗಳನ್ನು ಕೇಳಿಲ್ಲ ಎಂದರು.

ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್ ಬಗ್ಗೆ ಆಡಳಿತ ಪಕ್ಷದ ಸದ್ಯರು ಮತ್ತು ಶಾಸಕರಿಗೆ ಅಸಮಾಧಾನವಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗಗಳಿಗೆ ಏನೂ ಮಾಡಿಲ್ಲ. ಮಾಜಿ ಸಚಿವರಾದ ಎಚ್.ಕೆ.ಪಾಟೀಲ್ ಅವರೇ ಈ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಕ್ಷೇತ್ರ ಬಾದಾಮಿಗೆ ಅನುದಾನ ಕೇಳಿ ಪತ್ರ ಬರೆದಿದ್ದರು. ಆ ಅನುದಾನವನ್ನೂ ನೀಡದೇ ಅವಮಾನ ಮಾಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.

Facebook Comments

Sri Raghav

Admin