ಮೈಸೂರಿನಿಂದ ಬೆಂಗಳೂರಿಗೆ ಬಂದ ಜೀವಂತ ಹೃದಯ

ಈ ಸುದ್ದಿಯನ್ನು ಶೇರ್ ಮಾಡಿ

Heart--01

ಮೈಸೂರು, ಜು.7- ಇಂದು ಬೆಳಗ್ಗೆ ಮೈಸೂರಿನಿಂದ ಬೆಂಗಳೂರಿಗೆ ಜಿರೋ ಟ್ರಾಫಿಕ್‍ನಲ್ಲಿ ಹೃದಯ ರವಾನಿಸಲಾಯಿತು. ನಗರದ ಅಪಲೋ ಆಸ್ಪತ್ರೆಯಿಂದ ಹೃದಯವನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಯಿತು. ಚಾಮುಂಡಿಬೆಟ್ಟದಲ್ಲಿ ಮೊನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರು ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಕುಳಿತಿದ್ದ ಯುವತಿ ಗಂಭೀರ ಗಾಯಗೊಂಡಿದ್ದರು.

ಈ ಯುವತಿಯನ್ನು ನಗರದ ಅಪಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈಕೆ ಬದುಕುಳಿಯುವ ಸಾಧ್ಯತೆ ಕ್ಷೀಣಿಸಿದ ಹಿನ್ನೆಲೆಯಲ್ಲಿ ಪೋಷಕರ ಒಪ್ಪಿಗೆ ಮೇರೆಗೆ ಈಕೆಯ ಹೃದಯವನ್ನು ಮತ್ತೊಬ್ಬರಿಗೆ ಅಳವಡಿಸಲು ತೀರ್ಮಾನಿಸಿ ಇಂದು ಬೆಳಗ್ಗೆ ಮೈಸೂರಿನಿಂದ ಬೆಂಗಳೂರಿಗೆ ಹೃದಯ ರವಾನಿಸಲಾಯಿತು.

Facebook Comments

Sri Raghav

Admin