ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಮನೆ ಲೂಟಿ ..!

ಈ ಸುದ್ದಿಯನ್ನು ಶೇರ್ ಮಾಡಿ

Chidambaram--01

ಚೆನ್ನೈ, ಜು.8- ಕೇಂದ್ರದ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರ ನಿವಾಸದಲ್ಲಿ 1.5 ಲಕ್ಷ ನಗದು ಹಾಗೂ 1 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಚೋರರು ದೋಚಿರುವ ಪ್ರಕರಣ ಇಂದು ಬೆಳಕಿಗೆ ಬಂದಿದೆ. ಚೆನ್ನೈನ ನುನ್‍ಗಾಮ್‍ಬಿಕಾಮ್ ಪ್ರದೇಶದಲ್ಲಿರುವ ಪಿ.ಚಿದಂಬರಂ ಅವರ ಮನೆಯಲ್ಲಿ ಕೆಲವು ದಿನಗಳ ಹಿಂದೆ ನಗದು, ಚಿನ್ನಾಭರಣಗಳು ಕಳವು ಆಗಿದ್ದವು. ಈ ಕುರಿತು ಇಂದು ಪ್ರಕರಣ ಬೆಳಕಿಗೆ ಬಂದಿದ್ದು ಪೆಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಘಟನೆ ಬೆಳಕಿಗೆ ಬಂದ ತಕ್ಷಣ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರ ನಿವಾಸಕ್ಕೆ ಬೆರಳಚ್ಚು ತಜ್ಞರು, ಶ್ವಾನದಳದೊಂದಿಗೆ ಪೆಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಚಿದಂಬರಂ ಅವರ ಮನೆಯಲ್ಲಿ ಕೆಲಸ ಮಾಡುತ್ತಿರುವವರು ಹಾಗೂ ಭದ್ರತಾ ಸಿಬ್ಬಂದಿಗಳೇ ಈ ಕಳವು ಪ್ರಕರಣದಲ್ಲಿ ಭಾಗಿಯಾಗಿರಬಹುದೆಂದು ಶಂಕಿಸಿದ್ದು ಅವರ ಬೆರಳಚ್ಚುಗಳ ಮುದ್ರಣವನ್ನು ಪಡೆದುಕೊಳ್ಳಲಾಗಿದೆ ಎಂದು ಹಿರಿಯ ಪೆಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ,

Facebook Comments

Sri Raghav

Admin