ಕುಮಾರಸ್ವಾಮಿ ವಚನಭ್ರಷ್ಟ ಮುಖ್ಯಮಂತ್ರಿ : ಜಗದೀಶ್ ಶೆಟ್ಟರ್

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01
ಹುಬ್ಬಳ್ಳಿ,ಜು.8- ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡದೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಚನ ಭ್ರಷ್ಟರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಬಹಳ ಕಾಲ ಮುಂದುವರೆಯುವುದಿಲ್ಲ ಎಂದು ಭವಿಷ್ಯ ನುಡಿದರು.

ನಗರದ ಹೊಸೂರು ವೃತ್ತದಲ್ಲಿರುವ ಡಾ.ಎಂ.ಎಂ.ಜೋಷಿ ಕಣ್ಣಿನ ಆಸ್ಪತ್ರೆಯಲ್ಲಿ ಬಿಜೆಪಿಯ ಕೇಂದ್ರ ಸರ್ಕಾರದ ನಾಲ್ಕು ವರ್ಷದ ಸಾಧನೆಯ ಪುಸ್ತಕವನ್ನು ಜೋಷಿ ಅವರಿಗೆ ನೀಡಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾಲಮನ್ನಾ ಘೋಷಣೆಯಿಂದ ರೈತರಿಗೆ ಹೆಚ್ಚಿನ ಲಾಭವಾಗಿಲ್ಲ. ಬದಲಿಗೆ ಅನ್ಯಾಯವಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಮೌನ ವಹಿಸಿದ್ದಾರೆ. ಬಸ್ ಪಾಸ್‍ಗಾಗಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದರು.

Facebook Comments

Sri Raghav

Admin