ಓವರ್ ಟೇಕ್ ಭರದಲ್ಲಿ ಕೆಎಸ್‌ಆರ್‌ಟಿಸಿ ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Bus-Accident--01

ತುಮಕೂರು,ಜು.8-ಕೆಎಸ್‍ಆರ್‍ಟಿಸಿಯ ಎರಡು ಬಸ್‍ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು , 8ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ವಲಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ತುಮಕೂರು ಹೊರವಲಯದ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಗಲಕೋಟೆ ಹಾಗೂ ಗದಗದಿಂದ ಬೆಂಗಳೂರಿಗೆ ಬರುತ್ತಿದ್ದ ಈ ಎರಡು ಕೆಎಸ್‍ಆರ್‍ಟಿಸಿ ಬಸ್‍ಗಳು ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತಕ್ಕೀಡಾಗಿವೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು , ಮೃತ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಸಂಚಾರಿ ದಟ್ಟಣೆಯಿಂದಾಗಿ ಜನ ಪರದಾಡುವಂತಾಯಿತು. ಸುಮಾರು 4 ಕಿ.ಮೀವರೆಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ನಿಂತು ಟ್ರಾಫಿಕ್‍ಜಾಮ್ ಉಂಟಾಗಿತ್ತು.

Facebook Comments

Sri Raghav

Admin