ಅಹಮ್ಮದ್ ಪಟೇಲ್‍ಗೆ ಸುಪ್ರೀಂ ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

Ahamad-Patel

ನವದೆಹಲಿ, ಜು.9- ಗುಜರಾತ್‍ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಹಮ್ಮದ್ ಪಟೇಲ್ ಅವರ ಆಯ್ಕೆಯನ್ನು ವಜಾಗೊಳಿಸಬೇಕೆಂದು ಬಿಜೆಪಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.  ಚುನಾವಣೆ ಸಂದರ್ಭದಲ್ಲಿ ನೀತಿ-ಸಂಹಿತೆ ಉಲ್ಲಂಘಿಸಿ ಅನಧಿಕೃತವಾಗಿ ಶಾಸಕರನ್ನು ಇರಿಸಿಕೊಂಡು ಅವರಿಗೆ ಭಯ ಹುಟ್ಟಿಸಿ ಮತದಾನ ಮಾಡಿಸಲಾಗಿದೆ. ಇದು ಸ್ಪಷ್ಟವಾಗಿ ಚುನಾವಣಾ ಅಕ್ರಮ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು ಇದರ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅಹಮ್ಮದ್ ಪಟೇಲ್ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿ ಹೈಕೋರ್ಟ್ ಇದರ ಬಗ್ಗೆ ಗಮನ ಹರಿಸಬೇಕು ಎಂದಷ್ಟೇ ಹೇಳಿ ವಿಚಾರಣೆಯನ್ನು ಮುಂದೂಡಿದೆ.

Facebook Comments

Sri Raghav

Admin