ಮಾಜಿ ಶಿಕ್ಷಣ ಸಚಿವ ಬಿ.ಎ.ಮೊಹದ್ದೀನ್ ವಿಧಿವಶ

ಈ ಸುದ್ದಿಯನ್ನು ಶೇರ್ ಮಾಡಿ

Mohideen

ಬೆಂಗಳೂರು. ಜು. 10 : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಹದ್ದೀನ್ (80) ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದರು.  ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ ಮೊಹದ್ದೀನ್, 1978 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಶಾಸಕರಾಗಿದ್ದರು. ನಂತರ ಜನತಾ ಪರಿವಾರ ಸೇರಿ ಮಾಜಿ ಸಿಎಂ ಜೆ.ಹೆಚ್. ಪಟೇಲ್ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದರು. ನಂತರ ಮತ್ತೆ ಕಾಂಗ್ರೆಸ್ ಪಕ್ಷ ಸೇರಿ ಎಐಸಿಸಿ ಸದಸ್ಯರಾಗಿಯೂ ಕೆಲಸ ಮಾಡಿದ್ದರು. ಪಾರ್ಥಿವ  ಶರೀರವನ್ನು 8 ಗಂಟೆಗೆ ಸಂಜಯ ನಗರ ನಿವಾಸಕ್ಕೆ ಕೊಂಡೊಯ್ಯಲಾಗುವುದು. 11 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಂತರ ಮಂಗಳೂರಿಗೆ ಕೊಂಡೊಯ್ಯಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

Facebook Comments

Sri Raghav

Admin