ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಹಿದ್ದೀನ್ ನಿಧನ, ಸಿಎಂ ಕುಮಾರಸ್ವಾಮಿ ಸಂತಾಪ

ಈ ಸುದ್ದಿಯನ್ನು ಶೇರ್ ಮಾಡಿ

Mohiddeen

ಬೆಂಗಳೂರು, ಜು.10- ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಹಿದ್ದೀನ್ (80) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.  ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ ಮೊಹದ್ದೀನ್, 1978ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಶಾಸಕರಾಗಿದ್ದರು. ನಂತರ ಜನತಾ ಪರಿವಾರ ಸೇರಿ ಮಾಜಿ ಸಿಎಂ ಜೆ.ಹೆಚ್.ಪಟೇಲ್ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದರು. ನಂತರ ಮತ್ತೆ ಕಾಂಗ್ರೆಸ್ ಸೇರಿ ಎಐಸಿಸಿ ಸದಸ್ಯರಾಗಿಯೂ ಕೆಲಸ ಮಾಡಿದ್ದರು.

ಉಸಿರಾಟದ ತೊಂದರೆ ಸೇರಿದಂತೆ ವಯೋ ಸಹಜ ಕಾಯಿಲೆಯಿಂದ ಮೊಯಿದ್ದೀನ್ ಬಳಲುತ್ತಿದ್ದರು. ಮೂಲತಃ ಮಂಗಳೂರು ನಿವಾಸಿಗಳಾಗಿದ್ದು, ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನನ್ನೊಳಗಿನ ನಾನು ಎಂಬ ಆತ್ಮಕಥೆಯನ್ನು ಮೊಯಿದ್ದೀನ್ ಬರೆದಿದ್ದರು. ಆದರೆ, ಪುಸ್ತಕ ಇನ್ನೂ ಬಿಡುಗಡೆ ಆಗಿರಲಿಲ್ಲ. ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿದ್ದ ಮೊಯಿದ್ದೀನ್ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದರು. ಸದ್ಯ ಅವರ ಪಾರ್ಥೀವ ಶರೀರವನ್ನು ರಾಮಯ್ಯ ಆಸ್ಪತ್ರೆಯಿಂದ ಸಂಜಯ್ ನಗರದಲ್ಲಿರುವ ಮೊಯಿದ್ದೀನ್ ಅವರ ನಿವಾಸಕ್ಕೆ ರವಾನಿಸಲಾಗಿದೆ.

ಮಧ್ಯಾಹ್ನ 11 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದಾದ ಬಳಿಕ ಅವರ ಹುಟ್ಟೂರು ಮಂಗಳೂರಿಗೆ ಕೊಂಡೊಯ್ದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಮಂಗಳೂರಿನ ಬಜ್ಪೆಯವರಾದ ಬಿ.ಎ. ಮೊಹಿದ್ದೀನ್, ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ನಂತರ ಜನತಾ ಪರಿವಾರದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು.ದೇವರಾಜ ಅರಸು ಅವರ ನಿಕಟವರ್ತಿಯಾಗಿದ್ದ ಅವರು, 1978ರಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಜನತಾ ಪರಿವಾರ ಸೇರಿ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದರು. ವಿಧಾನ ಪರಿಷತ್‍ನಲ್ಲಿ ಸುಮಾರು ಹತ್ತು ವರ್ಷ ಸದಸ್ಯರಾಗಿದ್ದರು. ಮಂಗಳೂರಿನಲ್ಲಿ ಕೈಗಾರಿಕೋದ್ಯಮಿಯೂ ಆಗಿದ್ದ ಅವರು, ಕೆಲವು ದಿನಗಳಿಂದ ಅನಾರೋಗ್ಯದ ಕಾರಣ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ವಲ್ಪ ಚೇತರಿಕೆ ಕಂಡು ಬಂದ ಬಳಿಕ ಬೆಂಗಳೂರಿಗೆ ತೆರಳಿ ಚಿಕಿತ್ಸೆಗೆ ಒಳಗಾಗಿದ್ದರು. ಅವರ ಮೃತದೇಹ ಮಂಗಳವಾರ ಮಧ್ಯಾಹ್ನ ಮಂಗಳೂರಿಗೆ ಬರಲಿದ್ದು, ಅವರ ಹುಟ್ಟೂರು ಬಜ್ಪೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ  ಕುಮಾರಸ್ವಾಮಿ ಸಂತಾಪ:

ಮಾಜಿ ಉನ್ನತ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಬಿ.ಎ.ಮೊಹಿದ್ದೀನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೇವರಾಜ ಅರಸು ಅವರ ಒಡನಾಡಿಯಾಗಿದ್ದ ಮೊಹಿದ್ದೀನ್ ಅವರು ನಂತರದ ವರ್ಷಗಳಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. 2016ರಲ್ಲಿ ರಾಜ್ಯ ಸರ್ಕಾರದ ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ನಿಧನದಿಂದ ನಾಡು ಹಿರಿಯ ಮುತ್ಸದ್ಧಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಿಎಂ ಕುಮಾರಸ್ವಾಮಿ ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲಿ ಎಂದು ಸಿಎಂ ಪ್ರಾರ್ಥಿಸಿದ್ದಾರೆ. 2016ರಲ್ಲಿ ರಾಜ್ಯ ಸರ್ಕಾರದ ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ನಿಧನದಿಂದ ನಾಡು ಹಿರಿಯ ಮುತ್ಸದ್ಧಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಮೊಹಿದ್ದೀನ್ ನಿವಾಸಕ್ಕೆ ಸಚಿವ ಯು.ಟಿ.ಖಾದರ್ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Facebook Comments

Sri Raghav

Admin