ಬಿಬಿಎಂಪಿಯಿಂದ 18ರಂದು ಆಚರಿಸಲು ಉದ್ದೇಶಿಸಿದ್ದ ಕೆಂಪೇಗೌಡರ ಜಯಂತಿ ಮುಂದೂಡಿಕೆ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Kempegowda--01

ಬೆಂಗಳೂರು, ಜು.11- ಬಿಬಿಎಂಪಿ ವತಿಯಿಂದ ಇದೇ 18ರಂದು ಆಚರಿಸಲು ಉದ್ದೇಶಿಸಿದ್ದ ನಾಡ ಪ್ರಭು ಕೆಂಪೇಗೌಡರ ಜಯಂತಿ ಮುಂದೂಡುವ ಸಾಧ್ಯತೆ ಇದೆ.
ಕಳೆದ ತಿಂಗಳು ಅರಮನೆ ಆವರಣದಲ್ಲಿ ಸರ್ಕಾರದ ವತಿಯಿಂದ ಕೆಂಪೇಗೌಡರ ಜಯಂತಿ ಆಚರಿಸಲಾಗಿತ್ತು. ಹಾಗಾಗಿ ಆ ಸಮಯದಲ್ಲಿ ಪಾಲಿಕೆ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿಲ್ಲ. ಸಾಮಾನ್ಯವಾಗಿ ಬೆಂಗಳೂರು ಕರಗದ ಸಮಯದಲ್ಲೇ ನಾಡ ಪ್ರಭುವಿನ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಬಾರಿಯ ಕರಗ ಉತ್ಸವದ ಸಂದರ್ಭದಲ್ಲಿ ವಿಧಾನಸಭೆ ಚುನಾವಣೆ ಎದುರಾದುದರಿಂದ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಕೆಂಪೇಗೌಡರ ಜಯಂತಿಯನ್ನು ಮುಂದಕ್ಕೆ ಹಾಕಲಾಗಿತ್ತು.

ಜು.18ರಂದು ಅದ್ದೂರಿಯಾಗಿ ಬಿಬಿಎಂಪಿ ವತಿಯಿಂದ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ನಿರ್ಧರಿಸಲಾಗಿತ್ತು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮಾರಂಭಕ್ಕೆ ಆಗಮಿಸಲು ಒಪ್ಪಿಗೆ ನೀಡಿದ್ದರು. ಆದರೆ ಅನ್ಯ ಕಾರ್ಯ ನಿಮಿತ್ತ ಜು.18ರಂದು ಕಾರ್ಯಕ್ರಮಕ್ಕೆ ಬರಲಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಅದ್ದರಿಂದ ಮತ್ತೆ ಕೆಂಪೇಗೌಡರ ಜಯಂತಿ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಎಚ್.ಡಿ. ಕುಮಾರಸ್ವಾಮಿ ಅವರು ಸಮಯ ಕೊಟ್ಟ ನಂತರ ಕೆಂಪೇಗೌಡರ ಜಯಂತಿ ಆಚರಣೆಗೆ ದಿನಾಂಕ ನಿಗದಿಪಡಿಸಲಾಗುತ್ತದೆ.

Facebook Comments

Sri Raghav

Admin