ಅದ್ದೂರಿ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕರಾಗಿ ಅಧಿಕಾರ ಸ್ವೀಕರಿಸಿದ ದಿನೇಶ್‍ ಗುಂಡೂರಾವ್

ಈ ಸುದ್ದಿಯನ್ನು ಶೇರ್ ಮಾಡಿ

Dinesh-Gundu-Rao-KPCC--01

ಬೆಂಗಳೂರು, ಜು.11-ರಾಜ್ಯ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ದಿನೇಶ್‍ಗುಂಡೂರಾವ್ ಅಧಿಕಾರ ಸ್ವೀಕರಿಸಿದರು. ಅರಮನೆ ಮೈದಾನದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಕಳೆದ ಎಂಟು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರು ದಿನೇಶ್‍ಗುಂಡೂರಾವ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕಾಗಿ ಅರಮನೆ ಮೈದಾನದ ಸುತ್ತಮುತ್ತ ಭಾರೀ ಪ್ರಮಾಣದ ಫ್ಲೆಕ್ಸ್, ಬ್ಯಾನರ್‍ಗಳನ್ನು ಹಾಕಲಾಗಿತ್ತು.

KPCC03

ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಮಂದಿ ಕಾರ್ಯಕರ್ತರು, ಮುಖಂಡರು ಆಗಮಿಸಿದ್ದರು. ವಿಧಾನಸಭೆಯ ಕಲಾಪವನ್ನು ಬದಿಗಿಟ್ಟು ಕಾಂಗ್ರೆಸ್ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ದಿನೇಶ್‍ಗುಂಡೂರಾವ್ ನಾಲ್ಕನೇ ಅವಧಿಗೆ ಶಾಸಕರಾಗಿದ್ದು , ಈ ಮೊದಲು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ, ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಘಟಾನುಘಟಿಗಳು ಪೈಪೋಟಿ ನಡೆಸಿದರು. ಯುವಕರಿಗೆ ಆದ್ಯತೆ ನೀಡಬೇಕೆಂಬ ಕಾರಣಕ್ಕಾಗಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ದಿನೇಶ್‍ಗುಂಡೂರಾವ್ ಅವರಿಗೆ ಅವಕಾಶ ನೀಡಿದ್ದಾರೆ.

KPCC02

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿರುವ ದಿನೇಶ್‍ಗುಂಡೂರಾವ್ ಅವರು, ಅದಕ್ಕಾಗಿ ಭಾರೀ ತಯಾರಿಗಳನ್ನೇ ಆರಂಭಿಸಿದ್ದಾರೆ. ನಿನ್ನೆ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರನ್ನು ಭೇಟಿ ಮಾಡಿ ಬಂದ ದಿನೇಶ್‍ಗುಂಡೂರಾವ್ ಅವರು ಇಂದು ಅಧಿಕಾರ ಸ್ವೀಕರಿಸಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬುವ ಭರವಸೆ ನೀಡಿದರು. ಎಂಟು ವರ್ಷಗಳಲ್ಲಿ ಪಕ್ಷದ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿರುವ ಪರಮೇಶ್ವರ್ ಅವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸುಗಮವಾಗಿ ಸರ್ಕಾರಗಳು ನಡೆಯಲು ಸಹಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ಅದೇ ಪರಿಪಾಠವನ್ನು ತಾವು ಮುಂದುವರೆಸುವುದಾಗಿ ದಿನೇಶ್‍ಗುಂಡೂರಾವ್ ಘೋಷಿಸಿದ್ದಾರೆ.

KPCC01

KPCC04

Facebook Comments

Sri Raghav

Admin