ಕೆಪಿಸಿಸಿ ಅಧ್ಯಕ್ಷರಾಗಿ ಗುಂಡೂರಾವ್, ಕಾರ್ಯಾಧ್ಯಕ್ಷರಾಗಿ ಖಂಡ್ರೆ ಇಂದು ಅಧಿಕಾರ ಸ್ವೀಕಾರ

ಈ ಸುದ್ದಿಯನ್ನು ಶೇರ್ ಮಾಡಿ

Dinesh--1

ಬೆಂಗಳೂರು, ಜುಲೈ 11 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಸಹ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು , ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸೇರಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ ಕೂಡ ಏಪಡಿಸಲಾಗಿದೆ.  ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ದಿನೇಶ್ ಗುಂಡೂರಾವ್ ಮತ್ತು ಈಶ್ವರ ಖಂಡ್ರೆ ಅವರು ಎಐಸಿಸಿ ಅಧಯಕ್ಷ ರಾಹುಲ್ ಗಾಂಧಿ ಅವರನ್ನು ನಿನ್ನೆ ದೆಹಲಿಯಲ್ಲಿ ಭೇಟಿ ಮಾಡಿದ್ದರು.

Facebook Comments

Sri Raghav

Admin