ಡ್ರಗ್ಸ್ ಕಳ್ಳ ಸಾಗಾಣಿಕೆದಾರರಿಗೆ ಗಲ್ಲು ಶಿಕ್ಷೆ ವಿಧಿಸಲು ಮುಂದಾದ ಲಂಕಾ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

Hang--01
ಕೊಲಂಬೋ, ಜು.11 (ಪಿಟಿಐ)- ಮಾದಕ ದ್ರವ್ಯ ಕಳ್ಳ ಸಾಗಾಣಿಕೆಯಲ್ಲಿ ತೊಡಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕಠಿಣ ನಿರ್ಧಾರಕ್ಕೆ ಶ್ರೀಲಂಕಾ ಸರ್ಕಾರ ಮುಂದಾಗಿದೆ. ದೇಶದ ಸಾರ್ವಭೌಮತೆಗೆ ಅಡ್ಡಿ ಪಡಿಸುತ್ತಿರುವ ಡ್ರಗ್ಸ್ ಮಾಫಿಯಾವನ್ನು ಕೊನೆಗಾಣಿಸುವ ಉದ್ದೇಶದಿಂದ ಮಾದಕ ದ್ರವ್ಯ ಸಾಗಣೆಯಲ್ಲಿ ತೊಡಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ನಿರ್ಧಾರಕ್ಕೆ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಸಮ್ಮತಿಸಿದ್ದಾರೆ ಎಂದು ಸಚಿವ ಗಮಿನಿ ಜಯವಿಕ್ರಮ ಪರೇರಾ ತಿಳಿಸಿದ್ದಾರೆ.

1976ರವರೆಗೂ ಮಾದಕ ದ್ರವ್ಯ ಕಳ್ಳ ಸಾಗಾಣಿಕೆದಾರರಿಗೆ ಗಲ್ಲುಶಿಕ್ಷೆ ವಿಧಿಸಲಾಗುತ್ತಿತ್ತು. ಆದರೆ, ನಂತರ ಗಲ್ಲುಶಿಕ್ಷೆಯನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ಶ್ರೀಲಂಕಾ ಜೈಲಿನ ಹಲವಾರು ಕೈದಿಗಳು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಮತ್ತೆ ಡ್ರಗ್ಸ್ ಕಳ್ಳಸಾಗಾಣಿಕೆದಾರರಿಗೆ ಗಲ್ಲುಶಿಕ್ಷೆ ವಿಧಿಸಲು ಶ್ರೀಲಂಕಾ ಸರ್ಕಾರ ಮುಂದಾಗಿದೆ.

Facebook Comments

Sri Raghav

Admin