ಇರಾನ್‍ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ದಾರುಣ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--01
ಟೆಹರಾನ್, ಜು.11- ಡಾಂಬರು ಸಾಗಿಸುತ್ತಿದ್ದ ಟ್ಯಾಂಕರ್ ಮತ್ತು ಪ್ರಯಾಣಿಕರಿದ್ದ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇರಾನ್‍ನಲ್ಲಿ ನಡೆದಿದೆ. ಕುರ್ದಿಸ್ಥಾನ್ ಸಮೀಪದ ಸಂದಾಜ್ ನಗರದಲ್ಲಿ ಮಧ್ಯರಾತ್ರಿ ಟಾರ್ ತುಂಬಿದ ಟ್ಯಾಂಕರ್ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಕಾಣಿಸಿಕೊಂಡು ನೋಡನೋಡುತ್ತಿದ್ದಂತೆ ಎರಡೂ ವಾಹನಗಳು ಸುಟ್ಟು ಭಸ್ಮವಾದವು. ಅಪಘಾತದಲ್ಲಿ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ 9 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಲ್ದಾಣದಿಂದ ಬಸ್ ಹೊರಬರುತ್ತಿದ್ದಂತೆ ಬ್ರೇಕ್‍ಫೇಲ್ ಆದ ಟ್ಯಾಂಕರ್ ವೇಗವಾಗಿ ಬಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಇರಾನ್ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

Facebook Comments

Sri Raghav

Admin