ಕಾವೇರಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾಗಿ ಸಚಿವ ಸಿ.ಎಸ್.ಪುಟ್ಟರಾಜು ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

C-S-Puttaraju

ಮಂಡ್ಯ, ಜು.11- ಕಾವೇರಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ನೇಮಕಗೊಂಡಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ರಚನೆಯಾಗಿರುವ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಅಧೀನಪಟ್ಟಂತೆ ಕಾವೇರಿ ನೀರಾವರಿ ಸಲಹಾ ಸಮಿತಿ ರಚಿಸಲಾಗಿದ್ದು, ಸಚಿವರು ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ರಾಜ್ಯ ಜಲಸಂಪನ್ಮೂಲ ಇಲಾಖೆ ಅಧೀನ ಕಾರ್ಯದರ್ಶಿ (ತಾಂತ್ರಿಕ-2) ಡಿ.ಅರ್ಚನಾ ಅವರು ಈ ಆದೇಶವನ್ನು ಜಾರಿ ಮಾಡಿದ್ದಾರೆ.

ಈ ಸಮಿತಿಗೆ ಏಳು ಮಂದಿ ಅಧಿಕಾರಿ ವರ್ಗದ ಸದಸ್ಯರು, 10 ಮಂದಿಯನ್ನು ವಿಶೇಷ ಆಹ್ವಾನಿತ ಸದಸ್ಯರನ್ನಾಗಿ ನೇಮಿಸಲಾಗಿದೆ. ಜಿಲ್ಲೆಯ ಎಲ್ಲ ಶಾಸಕರು ಖಾಯಂ ಸದಸ್ಯರಾಗಿರುತ್ತಾರೆ.   ಮಂಡ್ಯ, ಮೈಸೂರು ಜಿಲ್ಲಾಧಿಕಾರಿಗಳು, ಜಂಟಿ ಕೃಷಿ ನಿರ್ದೇಶಕರು, ಕಬಿನಿ ಅಧೀಕ್ಷಕ ಎಂಜಿನಿಯರ್, ವರುಣಾ ನಾಲಾ ವೃತ್ತದ ಅಧೀಕ್ಷಕ ಎಂಜಿನಿಯರ್, ಕೆಎಸ್‍ಆರ್‍ಎಸ್ ವೃತ್ತದ ಅಧೀಕ್ಷಕ ಎಂಜಿನಿಯರ್‍ಗಳು, ಕಾಡಾ ಆಡಳಿತಾಧಿಕಾರಿಗಳು, ಮಂಡ್ಯ-ಮೈಸೂರು ಪೊಲೀಸ್ ವರಿಷ್ಠಾಧಿಕಾರಿಗಳು, ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್‍ಗಳು ಸದಸ್ಯರಾಗಿರುತ್ತಾರೆ.

Facebook Comments

Sri Raghav

Admin