ಮಣಿಪುರದಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ 11 ಅಮಾಯಕ ಜೀವಗಳ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Manipura--01
ಇಂಫಾಲಾ, ಜು.11 (ಪಿಟಿಐ)- ಮಣಿಪುರದ ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಿದ ಭೂ ಕುಸಿತಕ್ಕೆ 11 ಮಂದಿ ಅಮಾಯಕ ಜೀವಗಳು ಬಲಿಯಾಗಿವೆ. ಸತತ ಮಳೆಯಿಂದ ಇಂದು ಮುಂಜಾನೆ ಟ್ಯಾಮ್‍ಗ್ಲಾಂಗ್ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಮೂರು ಕಡೆ ಗುಡ್ಡ ಕುಸಿದು ಈ ದುರ್ಘಟನೆ ಸಂಭವಿಸಿದೆ.  ಗುಡ್ಡ ಕುಸಿತಕ್ಕೆ 11 ಮಂದಿ ಪ್ರಾಣ ಕಳೆದುಕೊಂಡಿದ್ದು, ಇನ್ನೂ ಹಲವಾರು ಮಂದಿ ಕಣ್ಮರೆಯಾಗಿದ್ದು, ಅವರ ಹುಡುಕಾಟ ಶುರುವಾಗಿದೆ. ಘಟನಾ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ, ಸ್ಥಳೀಯ ಪೊಲೀಸರು ದೌಡಾಯಿಸಿದ್ದು, ಕಣ್ಮರೆಯಾದವರ ರಕ್ಷಣೆಗಾಗಿ ಹರಸಾಹಸ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ಬಹುತೇಕ ಮಂದಿ ಮಕ್ಕಳೇ ಆಗಿದ್ದಾರೆ. ಅನಾಹುತ ಸಂಭವಿಸಿದ ಪ್ರದೇಶಕ್ಕೆ ತೆರಳಲು ಪ್ರತಿಕೂಲ ಪರಿಸ್ಥಿತಿ ಇರುವುದರಿಂದ ರಕ್ಷಣಾ ಕಾರ್ಯ ನಿಧಾನಗತಿಯಲ್ಲಿ ಸಾಗುವಂತಾಗಿದೆ.

Facebook Comments

Sri Raghav

Admin