ರೈತರ ಸಾಲ ಮನ್ನಾವನ್ನು ಹಳದಿ ಕಣ್ಣಿನಿಂದ ನೋಡಬೇಡಿ : ಶಾಸಕ ಎ.ಟಿ.ರಾಮಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

A-T-Ramaswamy
ಬೆಂಗಳೂರು, ಜು.11-ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ 34 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದು, ಹಳದಿ ಕಣ್ಣಿನಿಂದ ನೋಡಬಾರದು ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ವಿಧಾನಸಭೆಗೆ ತಿಳಿಸಿದರು.ಪ್ರಸಕ್ತ ಸಾಲಿನ ಆಯವ್ಯಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದು ನಿಜ. ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಲು ಐದು ವರ್ಷಗಳ ಕಾಲಾವಕಾಶವಿದೆ ಎಂದರು.

ರಾಜ್ಯ ಸರ್ಕಾರ ಸಾಲ ಮನ್ನಾ ಯೋಜನೆಯನ್ನು ಪರಿಷ್ಕರಣೆ ಮಾಡಬೇಕು. ಪಡಿತರ ಚೀಟಿದಾರರಿಗೆ ಪ್ರತಿ ವ್ಯಕ್ತಿಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು ಮುಂದುವರ ಸಬೇಕು. ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡಲು ಕಾರ್ಯಕ್ರಮ ರೂಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು. ಉತ್ತಮ ಆಡಳಿತ ನೀಡಲು ಹೆಚ್ಚು ಕಾರ್ಯಕ್ರಮಗಳನ್ನು ಘೋಷಿಸಬೇಕು. ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಗಮನಹರಿಸಬೇಕು. ಕಾವೇರಿ ನೀರು ನಿರ್ವಹಣಾ ಸಮಿತಿ ರಚನೆಯಾಗಿರುವ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಮಹದಾಯಿ ಯೋಜನೆಯನ್ನೂ ಕೂಡ ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು.
ಮೇಯುವವರು ಬೇಡ:

Facebook Comments

Sri Raghav

Admin