ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಅಣ್ಣ-ತಂಗಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident-Mysuru

ಮೈಸೂರು, ಜು.12-ರಸ್ತೆಯಲ್ಲಿ ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ಅಣ್ಣ-ತಂಗಿ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಗೊರಳ್ಳಿಯ ಕಸಾಪ ಅಧ್ಯಕ್ಷ ಗೊರಳ್ಳಿ ಜಗದೀಶ್ ಅವರ ಪುತ್ರ ಅಮೋಘ (19) ಹಾಗೂ ಪುತ್ರಿ ಅಮೋಘವರ್ಷಿಣಿ (14) ಮೃತ ದುರ್ದೈವಿಗಳು.  ಅಮೋಘ ತನ್ನ ತಂಗಿಯೊಂದಿಗೆ ಗೊರಳ್ಳಿಯಿಂದ ರಾತ್ರಿ ಬೆಟ್ಟದಪುರದ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಪಿರಿಯಾಪಟ್ಟಣದ ರಸ್ತೆಯಲ್ಲಿನ ಮಂಜು ಎ ಬ್ರಿಡ್ಜ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಈ ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin