ಮದುವೆಗೆ ಒಪ್ಪದ ಪೋಷಕರು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

ಈ ಸುದ್ದಿಯನ್ನು ಶೇರ್ ಮಾಡಿ

Suicide

ಕೊಳ್ಳೇಗಾಲ,ಜು.12-ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದು ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕುಂತೂರು ಪ್ರಭುಲಿಂಗೇಶ್ವರ ಸ್ವಾಮಿ ಬೆಟ್ಟದ ಮೇಲೆ ಕಳೆದ ರಾತ್ರಿ ನಡೆದಿದೆ. ತಾಲ್ಲೂಕಿನ ಮುಳ್ಳೂರು ಗ್ರಾಮದ ನಿವಾಸಿಗಳಾದ ಪ್ರಕೃತಿ (18), ರೋಹಿತ್(18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಕಾಲೇಜಿನಲ್ಲಿ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿ ಕಳೆದ ಎರಡು ವರ್ಷದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಮದುವೆಗೆ ಒಪ್ಪಿಗೆ ನೀಡುವಂತೆ ಇಬ್ಬರ ಮನೆಯಲ್ಲೂ ಪ್ರಸ್ತಾಪ ಮಾಡಲಾಗಿತ್ತು.   ಆದರೆ ಎರಡೂ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ಮನನೊಂದು ರಾತ್ರಿ ಇಬ್ಬರು ಬೆಟ್ಟಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  ಇನ್ನು ಅಪ್ರಾಪ್ತರು ಮದುವೆಯ ವಯಸ್ಸು ಆಗಿಲ್ಲ. ಮೊದಲು ಓದಿ ಆಮೇಲೆ ನೋಡೋಣ ಎಂದು ಪೋಷಕರು ಬುದ್ದಿ ಮಾತು ಹೇಳಿದ್ದರೂ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕೊಳ್ಳೆಗಾಲ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin