ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

karnataka-Revine-dept
ಕರ್ನಾಟಕ ಕಂದಾಯ ಇಲಾಖೆಯ ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯು ಗ್ರಾಮಲೆಕ್ಕಿಗರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 53
ಹುದ್ದೆಗಳ ವಿವರ
ಗ್ರಾಮಲೆಕ್ಕಿಗರ ಹುದ್ದೆ – 53 (ಹೈಕ – 42)
ವಿದ್ಯಾರ್ಹತೆ : ದ್ವಿತೀಯಾ ಪಿ.ಯು.ಸಿ ಪಾಸಾಗಿರಬೇಕು. ಇಲ್ಲದಿದ್ದಲ್ಲಿ ಸಿಬಿಎಸ್’ಸಿ, ಐಸಿಎಸ್’ಸಿ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ, ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷ ಹಾಗೂ ಪ್ರವರ್ಗ1, ಪ.ಜಾ, ಪ.ಪಂ ದವರಿಗೆ 40 ವರ್ಷ ನಿಗದಿ ಪಡಿಸಲಾಗಿದೆ.
ಶುಲ್ಕ : ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದವರಿಗೆ 200 ರೂ, ಪ್ರವರ್ಗ1, ಪ.ಜಾ, ಪ.ಪಂ, ಮಹಿಳೆ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-08-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  http://bidar.nic.in   ಅಥವಾ http://bidar-va.kar.nic.in  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin