ಕೆಲಸಕ್ಕಿದ್ದ ಮಾಲೀಕರ ಮನೆಯಲ್ಲೇ ಚಿನ್ನಾಭರಣ ದೋಚಿದ್ದವನ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Crime

ಬೆಂಗಳೂರು, ಜು.13- ಕೆಲಸಕ್ಕಿದ್ದ ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಸೇವಕನನ್ನು ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿ 5.27 ಲಕ್ಷ ರೂ. ಮೌಲ್ಯದ 173 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಗಮಂಗಲ ತಾಲೂಕು ಬ್ರಹ್ಮದೇವರಹಳ್ಳಿ ಗ್ರಾಮದ ಮನೋಜ್ (21) ಬಂಧಿತ ಆರೋಪಿ. ಕೆಲಸ ನೀಡಿದ್ದ ಮಾಲೀಕರ ಮನೆಯಲ್ಲಿ ಕೆಲಸ ಮಾಡಿಕೊಂಡು ಮನೆಯ ಎಲ್ಲ ವಿಚಾರಗಳನ್ನೂ ತಿಳಿದುಕೊಂಡು ಮನೆಯವರೆಲ್ಲ ಹೊರಗೆ ಹೋಗಿದ್ದಾಗ ಚಿನ್ನದ ಬಳೆಗಳು, ಚಿನ್ನದ ಕಡಗ, ಉಂಗುರ ಮತ್ತು ಹಣವನ್ನು ಆಗಾಗ ಕಳ್ಳತನ ಮಾಡಿ ಅವುಗಳನ್ನು ಮಾರಾಟ ಮಾಡಿ ತನ್ನ ಸ್ವಂತ ಖರ್ಚಿಗೆ ಬಳಸಿಕೊಳ್ಳುತ್ತಿದ್ದನು.

ಮನೆಯಲ್ಲಿ ಹಣ-ಆಭರಣ ಕಳ್ಳತನವಾಗಿದ್ದ ಬಗ್ಗೆ ರಾಜಾಜಿನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಕೆಲಸಕ್ಕಿದ್ದ ಆರೋಪಿ ಮನೋಜ್‍ನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ ಚೇತನ್‍ಸಿಂಗ್ ರಾಥೋಡ್ ಮಾರ್ಗದರ್ಶನದಲ್ಲಿ ಮಲ್ಲೇಶ್ವರಂ ಉಪವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಧನಂಜಯ್ ಅವರ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಎನ್.ಎನ್.ರಾಮರೆಡ್ಡಿ ಮಾರ್ಗದರ್ಶನದಲ್ಲಿ ಪಿಎಸ್‍ಐ ಸುನಿಲ್‍ಕುಮಾರ್ , ಎಎಸ್‍ಐ ನರಸಿಂಹಮೂರ್ತಿ ಹಾಗೂ ಸಿಬ್ಬಂದಿಗಳಾದ ಲಕ್ಷ್ಮಿಕಾಂತ, ಚಂದ್ರಶೇಖರ್, ಪ್ರಸನ್ನಕುಮಾರ್, ಸುನಿಲ್, ಪ್ರದೀಪ ಬಲ್ಲಾ ಅವರನ್ನೊಳಗೊಂಡ ತಂಡ ಆರೋಪಿಯನ್ನು ಹಿಡಿದು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Facebook Comments

Sri Raghav

Admin