ಉಕ್ಕು ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿ 6 ಮಂದಿ ಸಾವು, ಐವರು ಚಿಂತಾಜನಕ

ಈ ಸುದ್ದಿಯನ್ನು ಶೇರ್ ಮಾಡಿ

6-Killed-01
ಹೈದರಾಬಾದ್,ಜು.13- ಉಕ್ಕು ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿ ಆರು ಮಂದಿ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಘಟನೆಯಲ್ಲಿ ಅಸ್ವಸ್ಥಗೊಂಡು ಚಿಕಿತ್ಸೆಗೆ ದಾಖಲಾಗಿದ್ದ ನಾಲ್ವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಖಾಸಗಿ ಉಕ್ಕಿನ ಕಾರ್ಖಾನೆಯಲ್ಲಿ ರೋಲಿಂಗ್ ಯೂನಿಟ್ ನಿರ್ವಹಣೆ ಮಾಡುತ್ತಿದ್ದ ವೇಳೆ ಅನಿಲ ಸೋರಿಕೆಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಇನ್ನೂ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Facebook Comments

Sri Raghav

Admin