16ಕ್ಕೆ ಸಿಎಂ ರಾಮನಗರ ಪ್ರವಾಸ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.13- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇದೇ 16ರಂದು ರಾಮನಗರ ಜಿಲ್ಲೆ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮ ಹಾಗೂ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ಹೊರಟು ರಾಮನಗರ ತಲುಪುವ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

10 ಗಂಟೆಗೆ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಕುಂದುಕೊರತೆಗಳನ್ನು ಆಲಿಸಿ ಅಹವಾಲು ಸ್ವೀಕರಿಸುವರು. ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಸಂಜೆ 6 ಗಂಟೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

Facebook Comments

Sri Raghav

Admin