ನಾನು ಪೆಟ್ರೋಲ್ ಬೆಲೆ ಏರಿಕೆ ಮಾಡಿದ್ರೆ ಕೇಳ್ತಿರಾ, ಮೋದಿ ಮಾಡಿದ್ರೆ ಏಕೆ ಕೇಳಲ್ಲ..?

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-n-01
ಬೆಂಗಳೂರು, ಜು.14- ನಾನು ರೈತರ ಸಾಲಮನ್ನಾ ಮಾಡಲು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸಣ್ಣ ಪ್ರಮಾಣದಲ್ಲಿ ಏರಿಕೆ ಮಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಎಷ್ಟು ಬಾರಿ ತೈಲ ಬೆಲೆ ಹೆಚ್ಚಳ ಮಾಡಿದ್ದಾರೆ. ಅದರ ಬಗ್ಗೆ ಮಾಧ್ಯಮಗಳು ಏಕೆ ಚಕಾರ ಎತ್ತಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಹರಿಹಾಯ್ದ ಘಟನೆ ನಡೆಯಿತು. ಶನಿವಾರ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಮಿತಿಗಳ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಸ್ಪಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

 

Facebook Comments

Sri Raghav

Admin