ಕೆಆರ್‌ಎಸ್ ಭರ್ತಿಗೆ ಕೇವಲ 2 ಅಡಿ ನೀರು ಮಾತ್ರ ಬಾಕಿ

ಈ ಸುದ್ದಿಯನ್ನು ಶೇರ್ ಮಾಡಿ

KRS-Dam--01
ಮೈಸೂರು, ಜು.14-ಕೃಷ್ಣರಾಜ ಸಾಗರ ಭರ್ತಿಗೆ ಕೇವಲ 2 ಅಡಿ ನೀರು ಮಾತ್ರ ಬಾಕಿ ಇದೆ. ಕೆಆರ್‍ಎಸ್‍ನ ಇಂದಿನ ನೀರಿನ ಮಟ್ಟ 122.70 ಅಡಿಗಳಷ್ಟಿದ್ದು, ಗರಿಷ್ಠ ಮಟ್ಟ 124.80 ಅಡಿಗಳು. ಇದು ಭರ್ತಿಯಾಗಲು ಇನ್ನು 2 ಅಡಿ ನೀರು ಮಾತ್ರ ತುಂಬಬೇಕಾಗಿದೆ. ಕೊಡಗು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 49.968 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಕೆಆರ್‍ಎಸ್‍ನಿಂದ 4,044 ಕ್ಯೂಸೆಕ್ ನೀರು ಮಾತ್ರ ಹೊರಬಿಡಲಾಗುತ್ತಿದೆ.

ಪ್ರವಾಹದ ಮುನ್ನೆಚ್ಚರಿಕೆಯನ್ನು ಈಗಾಗಲೇ ಸ್ಥಳೀಯರಿಗೆ ನೀಡಲಾಗಿದ್ದು, ಕೆಆರ್‍ಎಸ್ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚಾಗಿದೆ. ಹಾಗಾಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಕಾವೇರಿ ನದಿಯ ಎರಡೂ ದಂಡೆಗಳಲ್ಲಿನ ಸಾರ್ವಜನಿಕರು ತಮ್ಮ ಆಸ್ತಿ-ಪಾಸ್ತಿ ಜಾನುವಾರುಗಳ ರಕ್ಷಣೆಗಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕೆಆರ್‍ಎಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Facebook Comments

Sri Raghav

Admin