ರೈಲ್ವೆ ಅಭಿವೃದ್ಧಿ ಯೋಜನೆಗಳು ಮಂದಗತಿ, ಪ್ರಧಾನಿ ಮೇಲೆ ಖರ್ಗೆ ಗರಂ

ಈ ಸುದ್ದಿಯನ್ನು ಶೇರ್ ಮಾಡಿ

Mallikarju
ಕಲಬುರಗಿ, ಜು.14- ಬುಲೆಟ್ ಟ್ರೈನ್ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯ ರೈಲ್ವೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಪ್ರಧಾನಿ ಮೋದಿ ಅವರು ಜನಸಾಮಾನ್ಯರ ಬಗ್ಗೆ ಯೋಚಿಸುವುದಿಲ್ಲ. ಬುಲೆಟ್ ಟ್ರೈನ್ ಬಗ್ಗೆ ಮಾತನಾಡುತ್ತಾರೆ. ಪ್ರಾದೇಶಿಕ ರೈಲ್ವೆ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಅದೇಕೋ ನನ್ನ ಮೇಲೆ ಸಿಟ್ಟು ಎಂದು ಕಾಣುತ್ತದೆ. ನನ್ನ ಅವಧಿಯಲ್ಲಿ ಪ್ರಕಟಿಸಿದ ರೈಲ್ವೆ ಯೋಜನೆಗಳು ಮಂದಗತಿಯಲ್ಲಿ ಸಾಗುತ್ತಿವೆ. ಇದರ ಬಗ್ಗೆ ಅವರು ಚಿಂತಿಸುವುದಿಲ್ಲ ಎಂದು ಖರ್ಗೆ ಆರೋಪಿಸಿದರು. ದೇಶಾದ್ಯಂತ ಕಾಂಗ್ರೆಸ್‍ನ ಶಕ್ತಿ ಹೆಚ್ಚಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಖರ್ಗೆ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

Facebook Comments

Sri Raghav

Admin