ನಾಳೆಯಿಂದ ಸಂಚಾರಕ್ಕೆ ಮುಕ್ತವಾಗಲಿದೆ ಶಿರಾಡಿಘಾಟ್‍ ರಸ್ತೆ

ಈ ಸುದ್ದಿಯನ್ನು ಶೇರ್ ಮಾಡಿ

Shiradi-Ghat
ಹಾಸನ. ಜು.14 : ರಾಜಧಾನಿಯಿಂದ ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್‍ನ 2ನೇ ಹಂತದ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಂಡಿದ್ದು, ಇದೇ 15 ರಂದು ಸಂಚಾರಕ್ಕೆ ಮುಕ್ತವಾಗಲಿದೆ. ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರು ನೂತನ ರಸ್ತೆ ಉದ್ಘಾಟಿಸಲಿದ್ದಾರೆ.  ಕಳೆದ ಜನವರಿ 20 ರಿಂದ ಆರಂಭವಾಗಿದ್ದ 74 ಕೋಟಿ ರೂ. ವೆಚ್ಚ, 12.38 ಕಿಮೀ ಉದ್ದದ ಕಾಂಕ್ರೀಟ್ ರಸ್ತೆ ಕಾಮಗಾರಿ ಮುಗಿದಿದೆ. ನೂತನ ರಸ್ತೆ ಉದ್ಘಾಟನೆಗೆ ಅಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ. ಸೈಡ್ ವಾಲ್, ಸೂಚನಾ ಫಲಕ ಅಳವಡಿಕೆ ಸೇರಿದಂತೆ ಕೆಲವು ಸಣ್ಣಪುಟ್ಟ ಕೆಲಸ ಹೊರತುಪಡಿಸಿದರೆ ಸಿಮೆಂಟ್ ಹಾಕುವ ಕೆಲಸ ಮುಗಿದಿದೆ. ಕಳೆದ 6 ತಿಂಗಳಿಂದ ಬಂದ್ ಆಗಿದ್ದ ಶಿರಾಡಿ ಮಾರ್ಗ ಸಂಚಾರಕ್ಕೆ ಮುಕ್ತವಾಗಲಿದೆ.

Facebook Comments

Sri Raghav

Admin