ಪರಸ್ತ್ರೀ ಜೊತೆ ಪರಾರಿಯಾಗಿದ್ದ ವ್ಯಕ್ತಿಯನ್ನು ಕಲ್ಲಿನಿಂದ ಹೊಡೆದು ಕೊಂದ ಗ್ರಾಮಸ್ಥರು..!

ಈ ಸುದ್ದಿಯನ್ನು ಶೇರ್ ಮಾಡಿ

Rapist-Beaten

ಮುಝಫರ್‍ನಗರ್, ಜು.14-ವಿವಾಹಿತ ಸ್ತ್ರೀ ಜೊತೆ ಪರಾರಿಯಾಗಿದ್ದ 35 ವರ್ಷದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರ ಗುಂಪೊಂದು ಕಲ್ಲುಗಳಿಂದ ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಮುಝಫರ್‍ನಗರ್ ಜಿಲ್ಲೆಯ ಭೋಕಹೆರಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ಸಂಬಂಧ ಮಹಿಳೆಯ ಪತಿ ಮತ್ತು ಇತರ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಗುಂಪಿನಿಂದ ಕಲ್ಲೇಟಿಗೆ ಬಲಿಯಾದ ವ್ಯಕ್ತಿಯನ್ನು ಓಂ ಸಿಂಗ್ ಎಂದು ಗುರುತಿಸಲಾಗಿದೆ. ಈತ ಕಳೆದ ಮೂರು ವರ್ಷಗಳ ಹಿಂದೆ ಚಂದ್ರಪಾಲ್ ಎಂಬಾತನ ಪತ್ನಿಯೊಂದಿಗೆ ಪರಾರಿಯಾಗಿದ್ದ. ನಿನ್ನೆ ರಾತ್ರಿ ಗ್ರಾಮಕ್ಕೆ ಬಂದ ಓಂ ಸಿಂಗ್‍ನನ್ನು ಚಂದ್ರಪಾಲ್ ಮತ್ತು ಇತರ ಐವರು ಕಲ್ಲುಗಳಿಂದ ಹೊಡೆದು ಕೊಂದಿದ್ದರು ಎಂದು ಪೊಲೀಸ್ ಅಧಿಕಾರಿ ಬಿ.ಎಸ್.ಯಾದವ್ ತಿಳಿಸಿದ್ದಾರೆ. ಈ ಘಟನೆಯಿಂದ ಯಾವುದೇ ಅಹಿತಕರ ಕೃತ್ಯಗಳು ಸಂಭವಿಸದಂತೆ ಗ್ರಾಮದಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.

Facebook Comments

Sri Raghav

Admin