ಕೆಆರ್‌ಎಸ್ ನಿಂದ 20 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

KRS--01
ಮಂಡ್ಯ, ಜುಲೈ 14:- ಕೃಷ್ಣರಾಜಸಾಗರ ಜಲಾಶಯದ ಇಂದು ಶನಿವಾರ ಮಧ್ಯಾಹ್ನದಿಂದ 20 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಜಲಾಶಯದ ನೀರಿನ ಮಟ್ಟ 123 ಅಡಿ ಮುಟ್ಟಿರುವುದರಿಂದ ಹಾಗೂ 40,000 ಸಾವಿರಕ್ಕೂ ಹೆಚ್ಚು ಒಳ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಶನಿವಾರ ಮಧ್ಯಾಹ್ನ 1.20 ಗಂಟೆಗೆ ನದಿಗೆ ನೀರು ಬಿಡಲಾಯಿತು.

ಪ್ರವಾಹದ ಮುನ್ನೆಚ್ಚರಿಕೆಯನ್ನು ಈಗಾಗಲೇ ಸ್ಥಳೀಯರಿಗೆ ನೀಡಲಾಗಿದ್ದು, ಕೆಆರ್‍ಎಸ್ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚಾಗಿದೆ. ಹಾಗಾಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಕಾವೇರಿ ನದಿಯ ಎರಡೂ ದಂಡೆಗಳಲ್ಲಿನ ಸಾರ್ವಜನಿಕರು ತಮ್ಮ ಆಸ್ತಿ-ಪಾಸ್ತಿ ಜಾನುವಾರುಗಳ ರಕ್ಷಣೆಗಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕೆಆರ್‍ಎಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Facebook Comments

Sri Raghav

Admin